ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಜರ್ದಾರಿ ಭ್ರಷ್ಟಾಚಾರ ಪ್ರಕರಣ: ಸರ್ಕಾರಕ್ಕೆ ಸುಪ್ರೀಂ ತರಾಟೆ (Asif Ali Zardari | Supreme Court | Pakistan | Swiss courts)
Bookmark and Share Feedback Print
 
ಪಾಕ್ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ವಿರುದ್ಧ ಸ್ವಿಸ್ ಕೋರ್ಟ್‌ನಲ್ಲಿ ಬಾಕಿ ಇರುವ 60 ಮಿಲಿಯನ್ ಡಾಲರ್ ಭ್ರಷ್ಟಾಚಾರ ಆರೋಪ ಸೇರಿದಂತೆ ಹಣ ದುರುಪಯೋಗದ ಪ್ರಕರಣಗಳಿಗೆ ಸಂಬಂಧಿಸಿದ ಹೊಸ ದಾಖಲೆಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪಾಕಿಸ್ತಾನ ಸರ್ವೋಚ್ಚನ್ಯಾಯಾಲಯ ಕಾನೂನು ಸಚಿವಾಲಯಕ್ಕೆ ನಿರ್ದೇಶನ ನೀಡಿದೆ.

ಜರ್ದಾರಿ ವಿರುದ್ಧ ಭ್ರಷ್ಟಾಚಾರ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿರುವ ಸುಪ್ರೀಂಪೀಠ, ಈ ವಿಚಾರದಲ್ಲಿ ಕಾನೂನು ಸಚಿವಾಲಯದ ಮೂಲಕ ಪ್ರಧಾನಿ ಯೂಸೂಫ್ ರಾಜಾ ಗಿಲಾನಿ ದಿಕ್ಕುತಪ್ಪಿಸುತ್ತಿರುವುದಾಗಿ ಗಂಭೀರವಾಗಿ ಆರೋಪಿಸಿದೆ.

ಯೂಸೂಫ್ ರಾಜಾ ಗಿಲಾನಿ ನೇತೃತ್ವದ ಪಾಕಿಸ್ತಾನ ಸರ್ಕಾರ ನ್ಯಾಯಾಲಯದ ಆದೇಶವನ್ನು ನಿರ್ಲಕ್ಷಿಸುತ್ತಿರುವುದಾಗಿ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿ, ಭ್ರಷ್ಟಾಚಾರ ಪ್ರಕರಣದಲ್ಲಿ ಸರ್ಕಾರ ಕೂಡ ಬೇಜವಾಬ್ದಾರಿತನದಿಂದ ವರ್ತಿಸುತ್ತಿದೆ ಎಂದು ಛೀಮಾರಿ ಹಾಕಿದರು.

ಆ ನಿಟ್ಟಿನಲ್ಲಿ ಜರ್ದಾರಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಅಪೆಕ್ಸ್ ಕೋರ್ಟ್‌ಗೆ ಸಲ್ಲಿಸಬೇಕು ಎಂದು ಸೂಚಿಸಿರುವ ಸುಪ್ರೀಂಪೀಠ ವಿಚಾರಣೆಯನ್ನು ಜುಲೈ ಮೊದಲ ವಾರಕ್ಕೆ ಮುಂದೂಡಿರುವುದಾಗಿ ದಿ ನೇಷನ್ ಪತ್ರಿಕೆ ವರದಿ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ