ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕಿಸ್ತಾನ: ಅಮೆರಿಕದ ಡ್ರೋನ್ ದಾಳಿಗೆ 15 ಮಂದಿ ಬಲಿ (US drone attack | Pakistan | Waziristan | militants)
Bookmark and Share Feedback Print
 
ಪಾಕಿಸ್ತಾನದ ವಾಯುವ್ಯ ಪ್ರದೇಶದಲ್ಲಿ ಅಮೆರಿಕ ಮಿಲಿಟರಿ ಪಡೆ ನಡೆಸಿದ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿದ್ದು, 11 ಜನರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮದ ವರದಿಯೊಂದು ತಿಳಿಸಿದೆ.

ಶುಕ್ರವಾರ ಉತ್ತರ ವಜಿರಿಸ್ತಾನದ ಡಾಟ್ಟಾ ಖೇಲ್ ಪ್ರದೇಶದ ಮನೆಯೊಂದರ ಮೇಲೆ ಮೇಲೆ ಮಿಸೈಲ್ ಬಿದ್ದ ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಎರಡು ವಾರದಲ್ಲಿ ಈ ಪ್ರದೇಶದಲ್ಲಿ ನಡೆದ ಎರಡನೇ ಡ್ರೋನ್ ದಾಳಿ ಇದಾಗಿದೆ. ಗುರುವಾರ ನಡೆದ ದಾಳಿಯಲ್ಲಿ ಮೂರು ಮಂದಿ ಸಾವನ್ನಪ್ಪಿದ್ದರು.

ಕಳೆದ ಕೆಲವು ತಿಂಗಳಿನಿಂದ ಉತ್ತರ ವಜಿರಿಸ್ತಾನದಲ್ಲಿ ಠಿಕಾಣಿ ಹೂಡಿರುವ ಉಗ್ರರ ವಿರುದ್ಧ ಅಮೆರಿಕದ ಮಿಲಿಟರಿ ಪಡೆ ಡ್ರೋನ್ ದಾಳಿ ನಡೆಸುತ್ತಿದೆ. ಆದರೆ ಇದರಲ್ಲಿ ಹಲವು ನಾಗರಿಕರು ಸಾವನ್ನಪ್ಪಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ