ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಇಸ್ರೇಲ್: ಗುಂಡಿನ ದಾಳಿಗೆ ಪೊಲೀಸ್ ಬಲಿ (West Bank | Jerusalem | Israel | policeman | shot dead)
Bookmark and Share Feedback Print
 
ವೆಸ್ಟ್ ಬ್ಯಾಂಕ್ ನಗರದ ಹೆಬ್ರೋನ್‌ನಲ್ಲಿ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಸ್ರೇಲ್ ಪೊಲೀಸ್ ಸೋಮವಾರ ಬೆಳಿಗ್ಗೆ ಸಾವನ್ನಪ್ಪಿರುವುದಾಗಿ ಮಾಧ್ಯಮದ ವರದಿಯೊಂದು ತಿಳಿಸಿದೆ.

ಗುಂಡಿನ ದಾಳಿಯಲ್ಲಿ ಇನ್ನಿಬ್ಬರು ಪೊಲೀಸರು ಗಾಯಗೊಂಡಿದ್ದು, ಅದರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್ ವಕ್ತಾರ ಮಿಕ್ಕಿ ರೋಸೆನ್‌ಫೆಲ್ಡ್ ಕ್ಸಿನ್‌ಹುವಾಗೆ ತಿಳಿಸಿದ್ದು, ಇದೊಂದು ಭಯೋತ್ಪಾದನಾ ದಾಳಿ ಎಂದು ಹೇಳಿದ್ದಾರೆ.

ದಕ್ಷಿಣ ಜೆರುಸಲೇಂನ ಹೆಬ್ರೋನ್‌ ಸಮೀಪ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ ಸಂದರ್ಭದಲ್ಲಿ ಈ ಘಟನೆ ನಡೆದಿರುವುದಾಗಿ ಅವರು ವಿವರಿಸಿದ್ದಾರೆ. ಗುಂಡೇಟು ಬಿದ್ದ ಪೊಲೀಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಸಾವನ್ನಪ್ಪಿರುವುದಾಗಿ ಸ್ಥಳೀಯ ಮೂಲವೊಂದು ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ