ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಐಎಸ್ಐ-ತಾಲಿಬಾನ್ ಸಂಬಂಧ ಬರೇ ಸುಳ್ಳು: ಪಾಕಿಸ್ತಾನ (Taliban | ISI | Pakistan | Mahmood Qureshi | Afghanistan)
Bookmark and Share Feedback Print
 
ಅಫ್ಘಾನಿಸ್ತಾನದಲ್ಲಿ ಕಾರ್ಯಾಚರಿಸುತ್ತಿರುವ ತಾಲಿಬಾನ್ ಉಗ್ರರಿಗೆ ಪಾಕಿಸ್ತಾನದ ಐಎಸ್ಐ ಆರ್ಥಿಕ ನೆರವು ನೀಡಿ ತರಬೇತಿ ನೀಡುತ್ತಿದೆ ಎಂಬ ವರದಿಯನ್ನು ಪಾಕಿಸ್ತಾನ ವಿದೇಶಾಂಗ ಸಚಿವ ಷಾ ಮಹಮ್ಮದ್ ಖುರೇಷಿ ಸೋಮವಾರ ಸಾರಸಗಟಾಗಿ ತಳ್ಳಿಹಾಕಿದ್ದು, ಇದು ಸತ್ಯಕ್ಕೆ ದೂರವಾದದ್ದು, ಅಲ್ಲದೇ ತಾಲಿಬಾನೀಕರಣ ಉಭಯ ದೇಶಗಳಿಗೂ ಒಳ್ಳೆಯ ಬೆಳವಣಿಗೆ ಅಲ್ಲ ಎಂದು ತಿಳಿಸಿದ್ದಾರೆ.

ಲಂಡನ್‌ನ ಸ್ಕೂಲ್ ಆಫ್ ಇಕಾನಾಮಿಕ್ಸ್‌ನ ವರದಿ ನಿಜಕ್ಕೂ ಆಶ್ಚರ್ಯ ಮತ್ತು ಶಾಕ್ ನೀಡಿದೆ ಎಂದಿರುವ ಖುರೇಷಿ, ಐಎಸ್ಐ ಮತ್ತು ತಾಲಿಬಾನ್ ಗಳಸ್ಯ-ಕಂಠಸ್ಯ ಸಂಬಂಧ ಹೊಂದಿದೆ ಎಂದು ವರದಿ ಆರೋಪಿಸಿದ್ದು, ಇದು ಸತ್ಯಕ್ಕೆ ದೂರ ಎಂದು ಹೇಳಿದರು.

ಭಯೋತ್ಪಾದನೆ ವಿರುದ್ಧ ಪಾಕಿಸ್ತಾನದ ಐಎಸ್ಐ ಮತ್ತು ಮಿಲಿಟರಿ ಪಡೆ ನಡೆಸುತ್ತಿರುವ ಹೋರಾಟವನ್ನು ತಿರುಚಲು ಪಾಶ್ಚಾತ್ಯ ರಾಷ್ಟ್ರಗಳು ತಪ್ಪು ಸಂದೇಶ ರವಾನಿಸುತ್ತಿರುವುದಾಗಿ ಅವರು ಆರೋಪಿಸಿದರು. ನಿಜಕ್ಕೂ ಮಾಟ್ಟ ವಾಲ್ಡ್‌ಮನ್ ತಯಾರಿಸಿದ ಸಂಶೋಧನಾ ವರದಿ ಸುಳ್ಳಿನಿಂದ ಕೂಡಿದೆ ಎಂದು ಖುರೇಷಿ ಅಸಮಾಧಾನವ್ಯಕ್ತಪಡಿಸಿದರು.

ಪಾಕಿಸ್ತಾನದ ಪ್ರಜಾಪ್ರಭುತ್ವ ನೇತೃತ್ವದ ಸರ್ಕಾರ ಅಫ್ಘಾನಿಸ್ತಾನದಲ್ಲಿ ತುಂಬಾ ಸ್ಪಷ್ಟವಾಗಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ. ಅಲ್ಲದೇ ಅಫ್ಘಾನ್ ಆಂತರಿಕ ವಿಚಾರದಲ್ಲಿಯೂ ಪಾಕಿಸ್ತಾನ ಮೂಗು ತೂರಿಸುತ್ತಿಲ್ಲ. ನೆರೆ ರಾಷ್ಟ್ರದ ಸಮಸ್ಯೆಗಳಿಗೆ ಪೂರ್ಣ ಸಹಕಾರ ನೀಡುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ