ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್ ಜತೆ ನ್ಯೂಕ್ಲಿಯರ್ ಒಪ್ಪಂದ ಬೇಡ: ಚೀನಾಕ್ಕೆ ಅಮೆರಿಕ (China | Pakistan | nuclear deal | Obama | New Zealand,)
Bookmark and Share Feedback Print
 
ಪಾಕಿಸ್ತಾನದಲ್ಲಿ ಎರಡು ನ್ಯೂಕ್ಲಿಯರ್ ರಿಯಾಕ್ಟರ್ ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಚೀನಾ ಮತ್ತು ಪಾಕಿಸ್ತಾನ ನಡುವೆ ನಾಗರಿಕ ಪರಮಾಣು ಒಪ್ಪಂದಕ್ಕೆ ವಿರೋಧ ವ್ಯಕ್ತಪಡಿಸಲು ಅಮೆರಿಕ ಅಧ್ಯಕ್ಷ ಒಬಾಮಾ ನೇತೃತ್ವದ ಆಡಳಿತ ನಿರ್ಧರಿಸಿದೆ.

ಪರಮಾಣು ನಿಶ್ಯಸ್ತ್ರೀಕರಣ ಒಪ್ಪಂದಕ್ಕೆ ಸಹಿ ಹಾಕದ ದೇಶಗಳಿಗೆ ನ್ಯೂಕ್ಲಿಯರ್‌ಗೆ ಸಂಬಂಧಿಸಿದಂತೆ ಯಾವುದೇ ಒಪ್ಪಂದ ಮಾಡಿಕೊಳ್ಳುವುದಾಗಿಲಿ ಅಥವಾ ರಿಯಾಕ್ಟರ್ ಸ್ಥಾಪನೆ ಮಾಡುವುದು ಅಂತಾರಾಷ್ಟ್ರೀಯ ನೀತಿಯನ್ನು ಉಲ್ಲಂಘಿಸಿದಂತಾಗುತ್ತದೆ. ಆ ನಿಟ್ಟಿನಲ್ಲಿ ಚೀನಾ ಮತ್ತು ಪಾಕಿಸ್ತಾನ ನಡುವಿನ ಪರಮಾಣು ಒಪ್ಪಂದ ಒಪ್ಪಲು ಸಾಧ್ಯವಿಲ್ಲ ಎಂದು ಅಮೆರಿಕ ಹೇಳಿದೆ.

ಮುಂದಿನ ವಾರ ನ್ಯೂಜಿಲ್ಯಾಂಡ್‌ನಲ್ಲಿ ನ್ಯೂಕ್ಲಿಯರ್ ಸಪ್ಲೈಯರ್ ಗ್ರೂಪ್ಸ್‌ನ 46ದೇಶಗಳ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಚೀನಾ-ಪಾಕಿಸ್ತಾನ ನಾಗರಿಕ ಪರಮಾಣು ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇರುವುದಾಗಿ ನಿರೀಕ್ಷಿಸಲಾಗಿದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ತಿಳಿಸಿದೆ.

ಚೀನಾ ಪಾಕಿಸ್ತಾನಕ್ಕೆ ತನ್ನ ಸಹಕಾರವನ್ನು ಮುಂದುವರಿಸಲಿ ಆದರೆ ನ್ಯೂಕ್ಲಿಯರ್ ಒಪ್ಪಂದ ಕುರಿತಂತೆ ಚೀನಾ ಸರ್ಕಾರ ಮುಂದುವರಿಯಬಾರದು ಎಂದು ಅಮೆರಿಕ ನಿರೀಕ್ಷಿಸುತ್ತದೆ ಎಂದು ಸ್ಟೇಟ್ ಡಿಪಾರ್ಟ್‌ಮೆಂಟ್ ವಕ್ತಾರ ಗೋರ್ಡನ್ ಡುಗೈಡ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ