ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ: 2 ಬಲಿ (Indonesia | earthquake | tsunami | Yape | police)
Bookmark and Share Feedback Print
 
ಪೂರ್ವ ಇಂಡೋನೇಷ್ಯಾದಲ್ಲಿ ಬುಧವಾರ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಇಬ್ಬರು ಸಾವನ್ನಪ್ಪಿದ್ದು, ನೂರಾರು ಮನೆಗಳು ಭಾಗಶಃ ಹಾನಿಯಾಗಿದೆ. ಅಲ್ಲದೇ ತ್ಸುನಾಮಿ ಎಚ್ಚರಿಕೆಯನ್ನೂ ಕೂಡ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪ ರಿಕ್ಟರ್ ಮಾಪಕದಲ್ಲಿ 7.1ರಷ್ಟು ತೀವ್ರತೆ ದಾಖಲಾಗಿತ್ತು. ಯಾಪೆನ್ ದ್ವೀಪಪ್ರದೇಶದಲ್ಲಿ ಭೂಕಂಪದಿಂದಾಗಿ ಹಲವರು ಮನೆಯ ಅವಶೇಷಗಳಡಿಯಲ್ಲಿ ಸಿಲುಕಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಅಲ್ಲದೇ ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿರುವುದಾಗಿ ಪೊಲೀಸ್ ಅಧಿಕಾರಿ ಡೆನೈ ಸಿರೆಗಾರ್ ವಿವರಿಸಿದ್ದಾರೆ.

ಯಾಪೆನ್ ದ್ವೀಪಪ್ರದೇಶದಲ್ಲಿ ಸುಮಾರು 70 ಸಾವಿರ ಜನಸಂಖ್ಯೆ ಇದೆ. ಇದು ಈ ಪ್ರದೇಶದಲ್ಲಿ ಸಂಭವಿಸಿದ ಅತ್ಯಂತ ಭೀಕರ ಭೂಕಂಪವಾಗಿದೆ. ಘಟನೆಯಲ್ಲಿ ಒಂದು ಚರ್ಚ್‌ವೊಂದು ಧ್ವಂಸಗೊಂಡಿದ್ದು, 150ಕ್ಕೂ ಅಧಿಕ ಮನೆಗಳು ಭಾಗಶಃ ಹಾನಿಗೊಂಡಿದೆ ಎಂದು ತಿಳಿಸಿದ್ದಾರೆ.

ಪರಿಸ್ಥಿತಿ ಸದ್ಯಕ್ಕೆ ಉದ್ನಿಗ್ನವಾಗಿದ್ದು, ಆ ನಿಟ್ಟಿನಲ್ಲಿ ತ್ಸುನಾಮಿ ಎಚ್ಚರಿಕೆಯ ಹಿನ್ನೆಲೆಯಲ್ಲಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ