ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಆಸ್ಟ್ರೇಲಿಯಾ: ಗಾರ್ಗ್ ಹತ್ಯೆ-15 ವರ್ಷದ ಬಾಲಕ ಸೆರೆ (Nitin Garg | Australia | Victoria police | Indian student)
Bookmark and Share Feedback Print
 
ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿ ನಿತಿನ್ ಗಾರ್ಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15ರ ಹರೆಯದ ಪೋರನನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿ ತಿಂಗಳಿನಲ್ಲಿ ನಿತಿನ್ ಗಾರ್ಗನನ್ನು ಚೂರಿಯಿಂದ ಇರಿದು ಕೊಲ್ಲಲಾಗಿತ್ತು. ಇದೀಗ ಘಟನೆ ಕುರಿತಂತೆ ಪೂರ್ವ ಮೆಲ್ಬೊರ್ನ್‌ನ ವಿಕ್ಟೋರಿಯಾ ಪೊಲೀಸರು 15 ವರ್ಷದ ಬಾಲಕನನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸುವುದಾಗಿ ಅಧಿಕಾರಿಗಳು ವಿವರಿಸಿದ್ದಾರೆ.

ಗಾರ್ಗ್ ಹತ್ಯೆ ಬಗ್ಗೆ ಆತನ ಕುಟುಂಬದ ಸದಸ್ಯರ ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ಮುಂದುವರಿದಿರುವುದಾಗಿ ವಿಕ್ಟೋರಿಯಾ ಪೊಲೀಸ್ ವಕ್ತಾರ ತಿಳಿಸಿದ್ದಾರೆ.

ಗುರುವಾರ ಬಾಲಕನನ್ನು ಮಕ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಪೊಲೀಸರು ತಮ್ಮ ಪ್ರಕಟಣೆಯಲ್ಲಿ ಹೇಳಿದ್ದಾರೆ. ನಿತಿನ್ ಗಾರ್ಗ್ ಜನವರಿ 2ರಂದು ಮೆಲ್ಬೊರ್ನ್‌ನ ಕ್ರೂಕ್ಸ್‌ಶಾಂಕ್ ಪಾರ್ಕ್ ಸಮೀಪ ನಡೆದು ಹೋಗುತ್ತಿರುವಾಗ ಇರಿದು ಕೊಲ್ಲಲಾಗಿತ್ತು. ಇದು ಜನಾಂಗೀಯ ದ್ವೇಷದಿಂದ ನಡೆದ ಹತ್ಯೆ ಎಂದು ಸಾಕಷ್ಟು ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು.

ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಿರಂತರವಾಗಿ ಜನಾಂಗೀಯ ಹಲ್ಲೆ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಗಾರ್ಗ್ ಹತ್ಯೆ ಮತ್ತಷ್ಟು ಆಘಾತಕ್ಕೆ ಎಡೆಮಾಡಿಕೊಟ್ಟಿತ್ತು. ಅಲ್ಲದೇ ಆಸ್ಟ್ರೇಲಿಯಾದಲ್ಲಿ ಭಾರತೀಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಭಾರತ ಒತ್ತಾಯಿಸಿತ್ತು.
ಸಂಬಂಧಿತ ಮಾಹಿತಿ ಹುಡುಕಿ