ಪೇಶಾವರ: ಪಾಕಿಸ್ತಾನದ ವಾಯುವ್ಯ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿರುವ ವರ್ಷಧಾರೆ ಮತ್ತು ಪ್ರವಾಹದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 800ಕ್ಕೆ ಏರಿದೆ. ಪ್ರವಾಹದಿಂದಾಗಿ ದೇಶದ ಸಾವಿರಾರು ಮಂದಿಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅವರನ್ನೆಲ್ಲ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ರಕ್ಷಣಾ ತಂಡ ಕಾರ್ಯನಿರ್ವಹಿಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.