ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ ಎಂಬ ಬ್ರಿಟನ್ ಪ್ರಧಾನಿ ಡೇವಿಡ್ ಕ್ಯಾಮರೂನ್ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಪಾಕಿಸ್ತಾನ ಪ್ರಧಾನಿ ಯೂಸೂಫ್ ರಾಜಾ ಗಿಲಾನಿ, ಡೇವಿಡ್ ಮೊದಲು ಜಮ್ಮು-ಕಾಶ್ಮೀರದಲ್ಲಿನ ಮಾನವ ಹಕ್ಕುಗಳ ಉಲ್ಲಂಘನೆ ಬಗ್ಗೆಯೂ ಧ್ವನಿ ಎತ್ತಲಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಭಾರತಕ್ಕೆ ಇತ್ತೀಚೆಗೆ ನೀಡಿದ ಸಂದರ್ಭದಲ್ಲಿ ಡೇವಿಡ್ ಅವರು, ಪಾಕಿಸ್ತಾನ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದು ಹೇಳಿಕೆ ಕೊಟ್ಟಿದ್ದರು. ಹಾಗಾಗಿ ನಾವು ಡೇವಿಡ್‌ಗೆ ಸ್ಪಷ್ಟ ನುಡಿಗಳಲ್ಲಿ ಹೇಳುತ್ತೇವೆ, ಕಳೆದ 60 ವರ್ಷಗಳಿಂದ ಬ್ರಿಟನ್ ಜೊತೆ ಉತ್ತಮ ಸಂಬಂಧ ಹೊಂದಿದ್ದೇವೆ. ಆದರೆ ಪಾಕ್ ಉಗ್ರರನ್ನು ಪೋಷಿಸುತ್ತಿದೆ ಎಂಬ ಹೇಳಿಕೆ ಸರಿಯಲ್ಲ ಎಂದು ಗಿಲಾನಿ ಹೇಳಿರುವುದಾಗಿ ದಿ ಗಾರ್ಡಿಯನ್ ವರದಿ ಹೇಳಿದೆ.
ಡೇವಿಡ್ ಅವರು ಭಾರತದಲ್ಲಿ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಬಗ್ಗೆ ಮಾತನಾಡಿದ್ದೀರಿ. ಆದರೆ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ, ಉಗ್ರರ ಕೃತ್ಯದ ಬಗ್ಗೆ ಯಾಕೆ ಧ್ವನಿ ಎತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿರುವುದನ್ನು ನೀವು (ಡೇವಿಡ್) ಮರೆತ್ತಿದ್ದೀರಿ. ಹಾಗಾಗಿ ನೀವು ಕಾಶ್ಮೀರದ ಬಗ್ಗೆಯೂ ಮಾತನಾಡಬೇಕು. ಆದರೆ ನಾವು ಪಾಕಿಸ್ತಾನದಲ್ಲಿ ನಾವು ತುಂಬಾ ಸುಖಕರವಾಗಿದ್ದೇವೆ ಎಂದರು.
ಅಲ್ಲದೆ, ಭಾರತದೊಂದಿಗೆ ಮಾತುಕತೆ ನಡೆಸುವ ಇಚ್ಛೆ ವ್ಯಕ್ತಪಡಿಸಿರುವ ಗಿಲಾನಿ, ಕಾಶ್ಮೀರ ಸೇರಿದಂತೆ ಬಾಕಿ ಉಳಿದ ವಿವಾದಗಳ ಪರಿಹಾರಕ್ಕಾಗಿ ಚರ್ಚೆ ನಡೆಸಲು ಉತ್ಸುಕವಾಗಿರುವುದಾಗಿ ತಿಳಿಸಿದ್ದಾರೆ.