ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಬಾಂಗ್ಲಾ ಆದೇಶ: ಇನ್ಮುಂದೆ ವಿದ್ಯಾರ್ಥಿಗಳಿಗೆ ಹೊಡೆಯುವಂತಿಲ್ಲ! (Bangladesh | canning | corporal punishments | Dhaka)
Bookmark and Share Feedback Print
 
ಶಾಲೆಗಳಲ್ಲಿ ಇನ್ಮುಂದೆ ಮಕ್ಕಳಿಗೆ ದೈಹಿಕ (ಛಡಿಯೇಟು, ಹೊಡೆಯುವುದು) ಶಿಕ್ಷೆ ನೀಡುವುದಕ್ಕೆ ಬಾಂಗ್ಲಾದೇಶ ನಿಷೇಧ ಹೇರಿದ್ದು, ಒಂದು ವೇಳೆ ಆ ರೀತಿ ಮಕ್ಕಳಿಗೆ ದೈಹಿಕ ಶಿಕ್ಷೆ ನೀಡಿದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಶಿಕ್ಷಕರಿಗೆ ಎಚ್ಚರಿಕೆ ನೀಡಿದೆ.

ಬಾಂಗ್ಲಾದ ಹಲವು ಶಾಲೆಗಳಲ್ಲಿ ಮಕ್ಕಳಿಗೆ ಅಮಾನವೀಯ ರೀತಿಯಲ್ಲಿ ದೈಹಿಕ ಶಿಕ್ಷೆ ನೀಡಿರುವ ಘಟನೆ ನಡೆದ ನಂತರ ಬಾಂಗ್ಲಾ ಈ ದಿಟ್ಟ ಕ್ರಮ ಕೈಗೊಂಡಿದೆ. ಶಾಲೆಗಳಲ್ಲಿ ಶಿಸ್ತು ಉಲ್ಲಂಘಿಸಿದ್ದಾರೆ, ಕಲಿಯಲು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಕಾರಣಕ್ಕೆ ಮಕ್ಕಳಿಗೆ ದೈಹಿಕ ಶಿಕ್ಷೆ ನೀಡುವಂತಿಲ್ಲ ಎಂದು ಕೆಲವು ಶಾಲೆಗಳ ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಿದೆ.

ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷೆ ನೀಡುತ್ತಿರುವ ಶಿಕ್ಷಕರನ್ನು ಶಾಲಾ ಆಡಳಿತ ಮಂಡಳಿ ಗುರುತಿಸಿರುವುದಾಗಿಯೂ ತಿಳಿಸಿರುವ ಶಿಕ್ಷಣ ಸಚಿವಾಲಯ, ಆ ನಿಟ್ಟಿನಲ್ಲಿ ನಿಷೇಧ ಜಾರಿಗೊಳಿಸಿರುವುದಾಗಿ ತಿಳಿಸಿದೆ.

ಶಾಲೆಗಳಲ್ಲಿ ಮಕ್ಕಳಿಗೆ ಶಿಕ್ಷಕರು ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸುವ ಕೆಲಸ ಮಾಡಿ, ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವ ಜವಾಬ್ದಾರಿ ಮಹತ್ತರವಾದದ್ದು ಎಂದು ಆದೇಶದಲ್ಲಿ ಹೇಳಿದೆ. ವಿದ್ಯಾರ್ಥಿಗಳನ್ನು ದೈಹಿಕವಾಗಿ ಶಿಕ್ಷಿಸುವುದರಿಂದ ಮಕ್ಕಳ ಬೆಳವಣಿಗೆ ಮೇಲೆ ಪರಿಣಾಮ ಬೀರಲಿದೆ ಎಂದು ತಿಳಿಸಿದೆ.

ಸರಕಾರದ ಆದೇಶದ ನಂತರವೂ ಶಿಕ್ಷಕರು ಅದನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಮಕ್ಕಳ ಕಾಯ್ದೆ ಅಥವಾ ಡಿಪಾರ್ಟ್‌ಮೆಂಟಲ್ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ. ಹಾಗಾಗಿ ಶಾಲೆಗಳಲ್ಲಿ ಮಕ್ಕಳಿಗೆ ಛಡಿಯೇಟು ನೀಡುವುದು, ಹೊಡೆಯುವುದು ಅಪರಾಧ ಎಂದು ಸ್ಪಷ್ಟಪಡಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ