ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕಿಸ್ತಾನದಲ್ಲಿ ಕಯಾನಿ ಪ್ರಭಾವಶಾಲಿ ವ್ಯಕ್ತಿ: ಅಮೆರಿಕ (Ashfaq Pervez Kayani | Army | Obama | Richard Holbrooke | Afghanistan,)
Bookmark and Share Feedback Print
 
ಪಾಕಿಸ್ತಾನದ ಮಿಲಿಟರಿ ವರಿಷ್ಠ ಜನರಲ್ ಅಶ್ಫಾಕ್ ಪರ್ವೆಜ್ ಕಯಾನಿ ಪ್ರಭಾವಶಾಲಿ ರಾಜಕೀಯ ವ್ಯಕ್ತಿಯಾಗಿದ್ದಾರೆ ಎಂದು ಅಮೆರಿಕದ ಒಬಾಮಾ ನೇತೃತ್ವದ ಆಡಳಿತದ ಪಾಕ್ ಮತ್ತು ಅಫ್ಘಾನಿಸ್ತಾನದಲ್ಲಿನ ವಿಶೇಷ ಪ್ರತಿನಿಧಿ ಅಭಿಪ್ರಾಯಪಟ್ಟಿದ್ದಾರೆ.

ಪಾಕಿಸ್ತಾನದ ರಾಜಕೀಯದಲ್ಲಿ ಕಯಾನಿ ಪ್ರಭಾವಶಾಲಿ ವ್ಯಕ್ತಿ ಎಂಬುದು ಮಹತ್ವದ ಸಂಗತಿಯಾಗಿದೆ. ನಾವು ಅವರೊಂದಿಗೆ ಹೆಚ್ಚಿನ ಮಾತುಕತೆ ನಡೆಸುವುದಾಗಿಯೂ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿನ ಅಮೆರಿಕದ ವಿಶೇಷ ಪ್ರತಿನಿಧಿ ರಿಚರ್ಡ್ ಹಾಲ್‌ಬ್ರೂಕ್ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಜನರಲ್ ಕಯಾನಿ ಅತ್ಯಂತ ಪ್ರಭಾವಶಾಲಿ ವ್ಯಕ್ತಿ ಮತ್ತು ತುಂಬಾ ಮುಖ್ಯವಾದ ಸತ್ಯ ಸಂಗತಿಯಾಗಿದೆ. ಕಯಾನಿ ಐಎಸ್ಐನ ಮುಖ್ಯಸ್ಥರೂ ಆಗಿದ್ದಾರೆ.

ಅಷ್ಟೇ ಅಲ್ಲ ಕಯಾನಿ ತಂತ್ರಗಾರಿಕೆಯ ಆಲೋಚನೆಯುಳ್ಳ ವ್ಯಕ್ತಿ ಎಂಬುದಾಗಿಯೂ ಹಾಲ್‌ಬ್ರೂಕ್ ಈ ಸಂದರ್ಭದಲ್ಲಿ ತಿಳಿಸಿದ್ದಾರೆ. ಪಾಕಿಸ್ತಾನದಲ್ಲಿ ಸದ್ಯದ ಸ್ಥಿತಿಯಲ್ಲಿ ಪಾಕ್ ಅಧ್ಯಕ್ಷ ಜರ್ದಾರಿ, ಪ್ರಧಾನಿ ಗಿಲಾನಿಗಿಂತ ಕಯಾನಿಯೇ ತುಂಬಾ ಪ್ರಭಾವಶಾಲಿಯಾಗಿದ್ದಾರೆ ಎಂದು ವಿವರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ