ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ನೇಪಾಳ-ಪಿಎಂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ: ಪೌಡ್ಯಾಲ್ (Nepali Congress | Kathmandu | Poudyal | Prachanda)
Bookmark and Share Feedback Print
 
ಪ್ರಧಾನಿ ಸ್ಪರ್ಧೆಯಿಂದ ತಮ್ಮ ಪಕ್ಷದ ಅಭ್ಯರ್ಥಿಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ನೇಪಾಳಿ ಕಾಂಗ್ರೆಸ್ ಸ್ಪಷ್ಟಪಡಿಸಿದ್ದು, ಪ್ರಧಾನಿ ಆಯ್ಕೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು ಒಮ್ಮತದ ನಿರ್ಧಾರಕ್ಕೆ ಬಾರದೆ ದೇಶದಲ್ಲಿನ ರಾಜಕೀಯ ಬಿಕ್ಕಟ್ಟು ಬಗೆಹರಿಯಲಾರದು ಎಂದು ತಿಳಿಸಿದೆ.

ಪ್ರಧಾನಿ ಹುದ್ದೆಯ ಸ್ಪರ್ಧೆಯಿಂದ ತಮ್ಮ ಪಕ್ಷದ ಅಭ್ಯರ್ಥಿಯನ್ನು ಹಿಂಪಡೆಯುವುದಿಲ್ಲ ಎಂದು ನ್ಯಾಷನಲ್ ಕಾಂಗ್ರೆಸ್ ತಿಳಿಸಿದ್ದು, ಆ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು ಒಮ್ಮತದ ನಿರ್ಧಾರ ತಳೆಯುವ ಮೂಲಕ ಕಳೆದ ಆರು ವಾರಗಳ ರಾಜಕೀಯ ಬಿಕ್ಕಟ್ಟು ಸ್ಥಿತಿಯನ್ನು ಅಂತ್ಯಗೊಳಿಸಬೇಕು ಎಂದು ಸಲಹೆ ನೀಡಿದೆ.

ಮಾವೋ ಪಕ್ಷದ ವರಿಷ್ಠ ಪ್ರಚಂಡ ಅವರು ಪ್ರಧಾನಿ ಹುದ್ದೆಯ ಸ್ಪರ್ಧೆಯಿಂದ ತಾನು ಹಿಂದೆ ಸರಿಯುವುದಾಗಿ ಹೇಳಿಕೆ ನೀಡಿದ್ದರು. ಅದೇ ರೀತಿ ಅವರ ಪ್ರತಿಸ್ಪರ್ಧಿ ನೇಪಾಳಿ ಕಾಂಗ್ರೆಸ್ ಅಭ್ಯರ್ಥಿ ರಾಮ್ ಚಂದ್ರಾ ಪೌಡ್ಯಾಲ್ ಕೂಡ ಹಿಂದೆ ಸರಿಯುವುದಾಗಿ ತಿಳಿಸಿದ್ದರು. ಆದರೆ ಇದೀಗ ನೇಪಾಳಿ ಕಾಂಗ್ರೆಸ್ ಉಲ್ಟಾ ಹೊಡೆದಿದೆ.

ಪ್ರಧಾನಿ ಹುದ್ದೆ ಸ್ಪರ್ಧೆಯಿಂದ ಮಾವೋ ಪಕ್ಷದ ಅಭ್ಯರ್ಥಿ ಪ್ರಚಂಡ ಅವರನ್ನು ಕಣಕ್ಕಿಳಿಸುವುದಿಲ್ಲ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ. ಯಾಕೆಂದರೆ ಆ ಬಗ್ಗೆ ಅಧಿಕೃತವಾಗಿ ಯಾವುದೇ ಹೇಳಿಕೆ ಬಂದಿಲ್ಲ ಎಂದು ಪೌಡ್ಯಾಲ್ ಅವರು ಪಿಟಿಐ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ