ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಫಿಲಿಪೈನ್ಸ್ ಬಸ್ ಬ್ರೇಕ್ ಫೈಲ್; 35 ಪ್ರಯಾಣಿಕರ ಸಾವು (Philippine | bus accident | passenger bus | Baguio)
Bookmark and Share Feedback Print
 
ಫಿಲಿಪೈನ್ಸ್‌ನ ಉತ್ತರ ಭಾಗದಲ್ಲಿ ಪ್ರಯಾಣಿಕರಿಂದ ತುಂಬಿದ್ದ ಬಸ್ಸೊಂದು ಆಳವಾದ ಕಮರಿಗೆ ಉರುಳಿ ಬಿದ್ದ ಪರಿಣಾಮ 35ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ.

47 ಪ್ರಯಾಣಿಕರನ್ನು ಹೊತ್ತಿದ್ದ ಬಸ್ ಮಾನಿಲದಿಂದ ಉತ್ತರಕ್ಕೆ 200 ಕಿಲೋ ಮೀಟರ್ ದೂರದಲ್ಲಿರುವ ಪರ್ವತ ನಗರಿ ಬಾಗ್ವಿಯೋದತ್ತ ಹೊರಟಿತ್ತು. ಆದರೆ ದಾರಿ ಮಧ್ಯದಲ್ಲಿ ಬಸ್ಸಿನ ಬ್ರೇಕ್ ವಿಫಲಗೊಂಡ ಕಾರಣ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ಅಗ್ನಿಶಾಮಕ ದಳದ ವರಿಷ್ಠಾಧಿಕಾರಿ ರಿಚರ್ಡ್ ವಿಲ್ಲಾನುವಾ ತಿಳಿಸಿದ್ದಾರೆ.

ಘಟನೆಯಲ್ಲಿ 35 ಮಂದಿ ಬಲಿಯಾಗಿರುವುದು ಖಚಿತವಾಗಿದೆ ಎಂದು ರಾಷ್ಟ್ರೀಯ ಪೊಲೀಸ್ ವಕ್ತಾರ, ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಗ್ರಿಮೆರೋ ಕ್ರೂಜ್ ತಿಳಿಸಿದ್ದಾರೆ.

ಆರು ಮಂದಿ ಗಂಭೀರ ಗಾಯಗೊಂಡಿದ್ದ ಮತ್ತು ಪ್ರಜ್ಞೆ ಕಳೆದುಕೊಂಡಿದ್ದ ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಉಳಿದವರು ಸಣ್ಣ ಪುಟ್ಟ ಗಾಯಗಳಿಗೆ ಒಳಗಾಗಿದ್ದಾರೆ. ರಕ್ಷಿಸಲ್ಪಟ್ಟ ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ವಿವರಣೆ ನೀಡಿದ್ದಾರೆ.

ಹಳೆ ಬಸ್ಸುಗಳನ್ನು ರಸ್ತೆಗಿಳಿಸುತ್ತಿರುವುದರಿಂದ ಮತ್ತು ಅಜಾಗರೂಕತೆಯ ಚಾಲನೆಯಿಂದ ಫಿಲಿಪೈನ್ಸ್‌ನಲ್ಲಿ ರಸ್ತೆ ಅಪಘಾತಗಳು ಇತ್ತೀಚಿನ ವರ್ಷಗಳಲ್ಲಿ ಸಾಮಾನ್ಯವಾಗುತ್ತಿದೆ.

ಕಳೆದ ತಿಂಗಳಷ್ಟೇ ದೇಶದ ಎರಡನೇ ಅತಿ ದೊಡ್ಡ ನಗರ ಕೇಬು ಎಂಬಲ್ಲಿ ಕಾಂಕ್ರೀಟ್ ಗೋಡೆಯೊಂದಕ್ಕೆ ಬಸ್ಸು ಡಿಕ್ಕಿ ಹೊಡೆದು 15 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಸಂಬಂಧಿತ ಮಾಹಿತಿ ಹುಡುಕಿ