ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕಿಸ್ತಾನ: ಪ್ರಬಲ ಬಾಂಬ್ ಸ್ಫೋಟಕ್ಕೆ ಇಬ್ಬರು ಬಲಿ (Pakistan | Peshawar | Two blasts | police | Lahore)
Bookmark and Share Feedback Print
 
ಪಾಕಿಸ್ತಾನದ ವಾಯುವ್ಯ ಭಾಗದ ಮಸೀದಿಯೊಂದರ ಬಾಂಬ್‌‌ವೊಂದು ಸ್ಫೋಟಿಸಿದ್ದು, ಮತ್ತೊಂದು ಬಾಂಬ್ ಪೊಲೀಸ್ ವ್ಯಾನ್ ಬಳಿ ಸ್ಫೋಟಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ ಎಂದು ಮಾಧ್ಯಮದ ವರದಿಯೊಂದು ತಿಳಿಸಿದೆ.

ಖೈಬೆರ್ ಪಕ್ತುನ್‌ಖ್ವಾವಾ ಪ್ರಾಂತ್ಯದ ಮಾರ್ಡಾನ್ ಸಮೀಪದ ಅಹಮದಿ ಸಮುದಾಯದ ಮಸೀದಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆರು ಮಂದಿ ಗಾಯಗೊಂಡಿರುವುದಾಗಿ ಕ್ಸಿನ್‌ಹುವಾ ವರದಿ ಹೇಳಿದೆ.

ಇಂದು ಬೆಳಿಗ್ಗೆ ಪೇಶಾವರದಲ್ಲಿ ಪೊಲೀಸ್ ವ್ಯಾನ್ ಅನ್ನು ಗುರಿಯಾಗಿರಿಸಿಕೊಂಡು ಸ್ಫೋಟಿಸಿದ ಪ್ರಬಲ ಬಾಂಬ್ ದಾಳಿಯಲ್ಲಿ ಇಬ್ಬರು ಪೊಲೀಸರು ಬಲಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರವಷ್ಟೇ ಲಾಹೋರ್‌ನಲ್ಲಿ ಮೂರು ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 35 ಮಂದಿ ಬಲಿಯಾಗಿದ್ದಾರೆ. ಸುಮಾರು 200ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.
ಸಂಬಂಧಿತ ಮಾಹಿತಿ ಹುಡುಕಿ