ಇಸ್ಲಾಮಾಬಾದ್, ಶನಿವಾರ, 18 ಸೆಪ್ಟೆಂಬರ್ 2010( 16:07 IST )
ಕಳೆದ ಹಲವಾರು ವರ್ಷಗಳಿಂದ ವಿವಾದಕ್ಕೆ ಎಡೆಮಾಡಿಕೊಟ್ಟಿರುವ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಇದು ಸಕಾಲವಾಗಿದ್ದು, ಈ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯ ಸಮಸ್ಯೆ ನಿವಾರಿಸಬೇಕು ಎಂದು ಪಾಕಿಸ್ತಾನ್ ಮುಸ್ಲಿಮ್ ಲೀಗ್(ಎನ್)ನ ವರಿಷ್ಠ, ಮಾಜಿ ಪ್ರಧಾನಿ ನವಾಜ್ ಷರೀಫ್ ಒತ್ತಾಯಿಸಿದ್ದಾರೆ.
ಕಾಶ್ಮೀರಿಗಳ ವಿರುದ್ಧ ನಡೆಯುತ್ತಿರುವ ದಾಳಿ ಹಾಗೂ ಸಮಸ್ಯೆಯನ್ನು ಅಂತಾರಾಷ್ಟ್ರೀಯ ಸಮುದಾಯ ಗಂಭೀರವಾಗಿ ಪರಿಗಣಿಸಿ, ಸೂಕ್ತವಾದ ಪರಿಹಾರ ಒದಗಿಸುವ ಮೂಲಕ ದಕ್ಷಿಣ ಏಷ್ಯಾದಲ್ಲಿ ಶಾಂತಿ ಕಾಪಾಡಬೇಕಾಗಿದೆ ಎಂದು ಅವರು ಆಗ್ರಹಿಸಿರುವುದಾಗಿ ದಿ ನ್ಯೂಸ್ ವರದಿ ತಿಳಿಸಿದೆ.
ಕಾಶ್ಮೀರ ವಿವಾದ ಬಗೆಹರಿಹರಿಸಲು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬೇಕಾಗಿದೆ ಎಂದು ನವಾಜ್ ಅವರು ಆಲ್ ಪಾರ್ಟಿಸ್ ಹುರಿಯತ್ ಕಾನ್ಫರೆನ್ಸ್‌ನ ನಿಯೋಗಕ್ಕೆ ಸಲಹೆ ನೀಡಿದ್ದಾರೆ.
ಕಾಶ್ಮೀರ ವಿವಾದ ಇತ್ಯರ್ಥ ಕುರಿತ ಹೋರಾಟಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಹಾಗೂ ಪಿಎಂಎಲ್-ಎನ್ ತನ್ನ ನೈತಿಕ ಮತ್ತು ರಾಜಕೀಯ ಬೆಂಬಲವನ್ನು ಮುಂದುವರಿಸುವುದಾಗಿ ಹೇಳಿದರು.