ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಕಾಶ್ಮೀರ ನಮ್ದು-ಅಕ್ರಮ ಚಟುವಟಿಕೆ ನಿಲ್ಸಿ: ಪಾಕ್‌ಗೆ ಕೃಷ್ಣ ತಾಕೀತು (Jammu and Kashmir | SM Krishna | Pakistan | Stop illegal occupation)
Bookmark and Share Feedback Print
 
ಜಮ್ಮು-ಕಾಶ್ಮೀರ ಭಾರತದ ಆಂತರಿಕ ವಿಷಯವಾಗಿದ್ದು ಇದರಲ್ಲಿ ಬೇರೆ ಯಾವುದೇ ದೇಶ ಮೂಗು ತೂರಿಸುವ ಅಗತ್ಯವಿಲ್ಲ ಎಂದು ಎಚ್ಚರಿಕೆ ನೀಡಿರುವ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ, ಪಾಕಿಸ್ತಾನ ಜಮ್ಮು-ಕಾಶ್ಮೀರ ಭಾಗದಲ್ಲಿ ಅಕ್ರಮವಾಗಿ ಆಕ್ರಮ ಚಟುವಟಿಕೆ ನಿಲ್ಲಿಸಬೇಕು ಎಂದು ತಾಕೀತು ಮಾಡಿದ್ದಾರೆ.

ಕಾಶ್ಮೀರ ಭಾರತದ ಆಂತರಿಕ ವಿಷಯವಾಗಿದೆ ಎಂದು ಬುಧವಾರ ಆರಂಭಗೊಂಡ ವಿಶ್ವಸಂಸ್ಥೆಯ ಹತ್ತು ದಿನಗಳ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಪಾಕಿಸ್ತಾನ ಜಮ್ಮು-ಕಾಶ್ಮೀರದ ಕೆಲವು ಭಾಗಗಳನ್ನು ಅಕ್ರಮವಾಗಿ ವಶಪಡಿಸಿಕೊಳ್ಳುತ್ತಿರುವುದಾಗಿ ಆರೋಪಿಸಿದ ಅವರು, ಪಾಕಿಸ್ತಾನ ಮೊದಲು ಅಕ್ರಮ ಚಟುವಟಿಕೆಯನ್ನು ನಿಲ್ಲಿಸಲಿ. ನಂತರ ಭಾರತಕ್ಕೆ ಸಲಹೆ ನೀಡಲಿ ಎಂದು ಖಾರವಾಗಿ ಎಚ್ಚರಿಸಿದ್ದಾರೆ.

ಕಾಶ್ಮೀರದ ಬಗ್ಗೆ ನಾವು ಸಮರ್ಪಕವಾದ ರೀತಿಯಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾಶ್ಮೀರದ ವಿಷಯದಲ್ಲಿ ಭಾರತ ಸರಕಾರ ಒಮ್ಮತ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಕಾಶ್ಮೀರದಲ್ಲಿನ ಶಾಂತಿ-ಸುವ್ಯವಸ್ಥೆಗೆ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಅಷ್ಟೇ ಅಲ್ಲ ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ಇದರಲ್ಲಿ ಬೇರೆ ಯಾವುದೇ ದೇಶ ಮಧ್ಯಸ್ಥಿಕೆ ವಹಿಸುವ ಅಗತ್ಯವಿಲ್ಲ ಎಂದು ಕೃಷ್ಣ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ