ವಾಷಿಂಗ್ಟನ್, ಶುಕ್ರವಾರ, 24 ಸೆಪ್ಟೆಂಬರ್ 2010( 12:15 IST )
ಮುಂಬರುವ ನವೆಂಬರ್ ತಿಂಗಳ ಅವಧಿಯಲ್ಲಿ ಭಾರತಕ್ಕೆ ಭೇಟಿ ನೀಡಲಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ, ಭಾರತದಲ್ಲಿ ಪ್ರಜಾಪ್ರಭುತ್ವ ಯಶಸ್ವಿಯಾಗಿ ಶಾಂತಿಪಥವನ್ನು ಅನುಸರಿಸುತ್ತಿದೆ ಎಂದು ಹೇಳಿದ್ದಾರೆ.
ನವೆಂಬರ್ 19 ರಂದು ಭಾರತಕ್ಕೆ ಭೇಟಿ ನೀಡಲಿದ್ದೆನೆ. ಸುಮಾರು ನೂರು ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಭಾರತದ ಪ್ರಜಾಪ್ರಭುತ್ವ ಇತರ ರಾಷ್ಟ್ರಗಳಿಗೆ ಮಾದರಿಯಾಗಿದೆ ಎಂದು ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಒಬಾಮಾ ತಮ್ಮ ಭೇಟಿಯನ್ನು ಸಮರ್ಥಿಸಿಕೊಂಡಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ತಮ್ಮ ನಾಯಕನನ್ನು ಆಯ್ಕೆ ಮಾಡುವ ಅಧಿಕಾರ ಜನರು ಹೊಂದಿರುವುದರಿಂದ, ಉತ್ತಮ ನಾಯಕನ್ನು ಆಯ್ಕೆ ಮಾಡಿ ಅಭಿವೃದ್ಧಿಪಥದತ್ತ ಸಾಗಲು ಸಾಧ್ಯವಾಗುತ್ತದೆ.ಅಭಿವೃದ್ಧಿಯಲ್ಲಿ ಪ್ರಜಾಪ್ರಭುತ್ವ ಮಹತ್ತರ ಪಾತ್ರವಹಿಸುತ್ತದೆ ಎಂದು ಹೇಳಿದ್ದಾರೆ.
ಹಲವು ದ್ವಿಪಗಳನ್ನು ಹೊಂದಿರುವ ಮುಸ್ಲಿಂ ಪ್ರಾಬಲ್ಯದ ರಾಷ್ಟ್ರವಾದ ಇಂಡೋನೇಷ್ಯಾ ದೇಶಕ್ಕೆ ಕೂಡಾ ಭೇಟಿ ನೀಡಲಿದ್ದು, ಉಭಯ ದೇಶಗಳ ಮಧ್ಯೆ ಮತ್ತಷ್ಟು ಬಾಂಧವ್ಯ ವೃದ್ಧಿಯಾಗಲಿದೆ ಎಂದರು.
ಇಸ್ರೇಲ್ ಮತ್ತು ಅರಬ್ ರಾಷ್ಟ್ರಗಳ ಮಧ್ಯದ ವಿವಾದಗಳಿಗೆ ಅಂತಾರಾಷ್ಟ್ರೀಯ ಸಮುದಾಯಮಧ್ಯಪ್ರವೇಶಿಸಿ, ಹಲವು ಸುತ್ತಿನ ಚರ್ಚೆಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ಅಮೆರಿಕ ಅದ್ಯಕ್ಷ ಬರಾಕ್ ಒಬಾಮಾ ಅಭಿಪ್ರಾಯಪಟ್ಟಿದ್ದಾರೆ.