ನ್ಯೂಯಾರ್ಕ್, ಭಾನುವಾರ, 26 ಸೆಪ್ಟೆಂಬರ್ 2010( 12:45 IST )
ನೆರೆಯ ರಾಷ್ಟ್ರವಾದ ಪಾಕಿಸ್ತಾನದೊಂದಿಗೆ ಎಲ್ಲಾ ಸಮಸ್ಯೆಗಳನ್ನು ಚರ್ಚಿಸಲು ಭಾರತ ಸಿದ್ಧವಿದೆ ಎಂದು ಕೇಂದ್ರದ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಹೇಳಿದ್ದಾರೆ.
ನ್ಯೂಯಾರ್ಕ್‌ನ ವಿಶ್ವಸಂಸ್ಥೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಕೃಷ್ಣ, ಕಾಶ್ಮಿರ ಭಾರತದ ಅವಿಭಾಜ್ಯ ಅಂಗವಾಗಿದ್ದು, ವಿಶ್ವದ ಯಾವುದೇ ರಾಷ್ಟ್ರದ ಮಧ್ಯಸ್ಥಿಕೆಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆಯ ಸಂದೇಶವನ್ನು ರವಾನಿಸಿದರು.
ಪಾಕಿಸ್ತಾನದ ವಿದೇಶಾಂಗ ಸಚಿವ ಭಾರತಕ್ಕೆ ಶೀಘ್ರವೆ ಭಾರತಕ್ಕೆ ಭೇಟಿ ನೀಡಲಿದ್ದು, ಭಾರತದ ಹಾಗೂ ಪಾಕಿಸ್ತಾನದ ಸಮಸ್ಯೆಗಳನ್ನು ಒಟ್ಟಾರೆಯಾಗಿ ಚರ್ಚಿಸಿ ಪರಿಹಾರ ದೊರಕಿಸಿಕೊಡುವ ನಿಟ್ಟನಲ್ಲಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಆಗಮಿಸಿರುವ ಸಚಿವ ಕೃಷ್ಣ, ಪಾಕಿಸ್ತಾನ ಭಾರತದೊಂದಿಗೆ ದ್ವಿಪಕ್ಷಿಯ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಹಕಾರ ನೀಡಲಿದೆ ಎಂದು ಭಾವಿಸುವುದಾಗಿ ಹೇಳಿದ್ದಾರೆ.