ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಉಗ್ರರ ದಮನ-ಪಾಕ್ ಮೇಲೆ ಗೂಬೆ ಕೂರಿಸ್ಬೇಡಿ: ಮುಷ್ (Taliban | Musharraf | ISI | Pakistan | al Qaeda | Pashtun)
Bookmark and Share Feedback Print
 
ಪಾಕಿಸ್ತಾನದ ಇಂಟರ್ ಸರ್ವಿಸ್ ಇಂಟೆಲಿಜೆನ್ಸ್ (ಐಎಸ್ಐ) ತಾಲಿಬಾನ್ ಉಗ್ರಗಾಮಿಗಳಿಗೆ ಬೆಂಬಲ ನೀಡುತ್ತಿಲ್ಲ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೆಜ್ ಮುಷರ್ರಫ್ ತಿಳಿಸಿದ್ದು,ತಾನು ಐಎಸ್ಐ ತಾಲಿಬಾನ್‌ಗೆ ಬೆಂಬಲ ನೀಡುತ್ತಿದೆ ಎಂದು ತಿಳಿಸಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಮಜಾಯಿಷಿ ನೀಡಿದ್ದಾರೆ.

ಪಾಕಿಸ್ತಾನದ ಇಂಟೆಲಿಜೆನ್ಸ್ ಏಜೆನ್ಸಿ ತಾಲಿಬಾನ್‌ಗೆ ಬೆಂಬಲ ನೀಡುತ್ತಿಲ್ಲ ಎಂದು ಮುಷ್ ಎಬಿಸಿಗೆ ನೀಡಿದ ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದಾರೆ. ಉಗ್ರರ ವಿರುದ್ಧ ಜಾಗತಿಕ ಸಮರ ಸಾರಿದ್ದು, ಕಳೆದ ಒಂಬತ್ತು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಕೂಡ ಅಲ್ ಖಾಯಿದಾ ಉಗ್ರರನ್ನು ಮಟ್ಟ ಹಾಕಲು ಪಾಕಿಸ್ತಾನ ಸರಕಾರ ಸಫಲವಾಗಿಲ್ಲ ಎಂಬ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಉಗ್ರರ ವಿಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ವಿರುದ್ಧ ಪ್ರತಿಬಾರಿಯೂ ಆರೋಪ ಹೊರಿಸಲಾಗುತ್ತಿದೆ. ಅದು ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಂಡಿಲ್ಲ ಎಂದೇ ದೂರಲಾಗುತ್ತದೆ. ಆದರೆ ನಾನು ಈ ಹೇಳಿಕೆಯನ್ನು ಖಂಡಿತಾ ಒಪ್ಪಲಾರೆ. ಯಾಕೆಂದರೆ ಪಾಕಿಸ್ತಾನ ಉಗ್ರರ ವಿರುದ್ಧ ನಡೆಸಿರುವ ಹೋರಾಟದ ಬಗ್ಗೆ ತೃಪ್ತಿ ಇದೆ ಎಂದರು.

ಉಗ್ರರ ವಿರುದ್ಧ ಪಾಕಿಸ್ತಾನ ಮಿಲಿಟರಿ ಪಡೆಯ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ ಎಂಬ ಹೇಳಿಕೆಯನ್ನು ಹೆಚ್ಚು ಪ್ರಚಾರ ನೀಡಬೇಡಿ. ಆ ನಿಟ್ಟಿನಲ್ಲಿ ದೇಶದಲ್ಲಿನ ಬಿಕ್ಕಟ್ಟನ್ನು ಪರಿಹರಿಸಲು ತಾನು ಸ್ವತಃ ರಾಜಕೀಯ ಅಖಾಡಕ್ಕೆ ಪ್ರವೇಶಿಸುವುದು ಅಗತ್ಯವಿದೆ ಎಂದು ಈ ಸಂದರ್ಭದಲ್ಲಿ ಒತ್ತಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ