ಪಾಕಿಸ್ತಾನ ಹಾಗೂ ನೆರೆಯ ದೇಶಗಳಲ್ಲಿ ಅಟ್ಟಹಾಸಗೈಯುತ್ತಿರುವ ಉಗ್ರರನ್ನು ಮಟ್ಟಹಾಕಲು ಪಾಕಿಸ್ತಾನ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಕಠಿಣ ನಿರ್ಧಾರ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಭಾರತಕ್ಕೆ ಭೇಟಿ ನೀಡುವ ಮುನ್ನ ಜರ್ದಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಚರ್ಚಿಸಿದ್ದಾರೆ.
ಪಾಕಿಸ್ತಾನದಲ್ಲಿ ಠಿಕಾಣಿ ಹೂಡಿ ಭಾರತ, ಅಫ್ಘಾನ್ ಹಾಗೂ ಅಮೆರಿಕಕ್ಕೂ ತಲೆನೋವು ತಂದಿರುವ ಉಗ್ರರನ್ನು ಪಾಕ್ ಮಟ್ಟಹಾಕಲೇಬೇಕು ಎಂದು ಬರಾಕ್ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಮಾಧ್ಯಮದ ವರದಿಯೊಂದು ತಿಳಿಸಿದೆ. ಈ ಬಗ್ಗೆ ಹೆಚ್ಚಿನ ಮಾತುಕತೆಯ ಅವಶ್ಯಕತೆ ಇದೆ ಎಂಬುದಾಗಿಯೂ ಬರಾಕ್ ಹೇಳಿದ್ದಾರೆ.
ಆ ನಿಟ್ಟಿನಲ್ಲಿ ಪಾಕಿಸ್ತಾನದಲ್ಲಿನ ಉಗ್ರರು ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಅಮೆರಿಕದ ನೆರವಿನೊಂದಿಗೆ ಮುಂದುವರಿಯುವುದಾಗಿ ಪಾಕಿಸ್ತಾನ ಭರವಸೆ ನೀಡಿದೆ.