ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪೇಶಾವರದಲ್ಲಿ ಉಗ್ರರ ಹೇಷಾರವಕ್ಕೆ 40ಕ್ಕೂ ಅಧಿಕ ಬಲಿ (Pakistan | Suicide blast | mosque | Dara Adamkhel)
Bookmark and Share Feedback Print
 
ವಾಯುವ್ಯ ಪಾಕಿಸ್ತಾನದ ಮಸೀದಿಯೊಂದರ ಮೇಲೆ ಉಗ್ರರ ಆತ್ಮಹತ್ಯಾ ಬಾಂಬರ್ ದಾಳಿಗೆ ಪ್ರಾರ್ಥನಾ ನಿರತ ಸುಮಾರು 40ಕ್ಕೂ ಅಧಿಕ ಮಂದಿ ಬಲಿಯಾಗಿರುವ ಘಟನೆ ಶುಕ್ರವಾರ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೇಶಾವರದ ಡರ್ರಾ ಅಡಂ ಖೇಲ್ ಸುನ್ನಿ ಪಂಥದ ಮಸೀದಿಯ ಮೇಲೆ ಉಗ್ರರು ಏಕಾಏಕಿ ಆತ್ಮಹತ್ಯಾ ಬಾಂಬರ್ ದಾಳಿ ನಡೆಸಿದ ಪರಿಣಾಮ 40ಕ್ಕೂ ಅಧಿಕ ಮಂದಿ ಸುಟ್ಟು ಕರಕಲಾಗಿದ್ದಾರೆ. ಸುಮಾರು 80 ಜನರು ಗಾಯಗೊಂಡಿರುವುದಾಗಿ ಸ್ಥಳೀಯ ಅಧಿಕಾರಿ ಶಾಹೀದ್ ಉಲ್ಲಾ ವಿವರಿಸಿದ್ದಾರೆ.

ಶುಕ್ರವಾರವಾಗಿದ್ದರಿಂದ ಮಸೀದಿಯಲ್ಲಿ ಸುಮಾರು 250 ಮಂದಿ ಪ್ರಾರ್ಥನೆಯಲ್ಲಿ ನಿರತರಾಗಿದ್ದಾರೆಂದು ಮೂಲವೊಂದು ತಿಳಿಸಿದೆ. ಆತ್ಮಹತ್ಯಾ ಬಾಂಬರ್ ಸ್ಫೋಟದಿಂದಾಗಿ ಮಸೀದಿಗೂ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆತ್ಮಹತ್ಯಾ ಬಾಂಬರ್ ದಾಳಿ ನಡೆದ ಕೂಡಲೇ ಮಿಲಿಟರಿ ಪಡೆ ಮಸೀದಿಯನ್ನು ಸುತ್ತುವರಿದಿದೆ. ಗಾಯಾಳುಗಳನ್ನು ಕೋಹಾಟ್ ಮತ್ತು ಪೇಶಾವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಸೀದಿಯ ಮೇಲ್ಛಾವಣಿ ಕುಸಿದು ಬಿದ್ದಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ವಿವರಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ