ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಕಾಯಂ ಸ್ಥಾನ ಪಡೆಯುವುದಕ್ಕೆ ಅಮೆರಿಕ ಅಧ್ಯಕ್ಷ ಒಬಾಮ ಬೆಂಬಲ ವ್ಯಕ್ತಪಡಿಸಿದ ಬೆನ್ನಲ್ಲೇ, ಚೀನಾ ಸಹ ಈ ಬಗ್ಗೆ ಸಹಮತ ವ್ಯಕ್ತಪಡಿಸಿದೆ.
ವಿಶ್ವಸಂಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುವ ಭಾರತದ ಇಚ್ಛೆ ನಮಗೆ ಅರ್ಥವಾಗುತ್ತದೆ. ಭದ್ರತಾ ಮಂಡಳಿಯಲ್ಲಿ ಸುಧಾರಣೆ ತರುವ ಬಗ್ಗೆ ಭಾರತದ ಜತೆ ಮಾತುಕತೆ ನಡೆಸಲು ನಾವು ಸಿದ್ದರಿದ್ದೇವೆ ಎಂದು ಚೀನಾ ಹೇಳಿದೆ.
ಅಂತಾರಾಷ್ಟ್ರೀಯ ವ್ಯವಹಾರಗಳಲ್ಲಿ ಭಾರತದ ಸ್ಥಾನಮಾನದ ಬಗ್ಗೆ ನಮಗೆ ಅರಿವಿದೆ. ಭದ್ರತಾ ಮಂಡಳಿಯಲ್ಲಿ ಸ್ಥಾನ ಪಡೆಯುವ ಭಾರತದ ಇರಾದೆ ಅರ್ಥ ಮಾಡಿಕೊಂಡಿದ್ದೇವೆ. ಅದಕ್ಕಾಗಿ ಎಲ್ಲಾ ಸದಸ್ಯ ರಾಷ್ಟ್ರಗಳೊಂದಿಗೆ ಚರ್ಚಿಸಿ ಭದ್ರತಾ ಮಂಡಳಿ ಸುಧಾರಣೆ ಬಗ್ಗೆ ನಮ್ಮ ನಿಲುವಿನ ಕುರಿತು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಚೀನಾ ಹೇಳಿದೆ.