ಮುಂದಿನ ವಾರದಿಂದ ಆರಂಭಗೊಳ್ಳಲಿರುವ ಪವಿತ್ರ ಹಜ್ ತೀರ್ಥಯಾತ್ರೆಯ ಹಿನ್ನೆಲೆಯಲ್ಲಿ ಅಲ್ ಖಾಯಿದಾ ಉಗ್ರಗಾಮಿ ಸಂಘಟನೆಯಿಂದ ದಾಳಿ ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದೇಶಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಸೌದಿ ಅರೇಬಿಯಾದ ಆಂತರಿಕ ಸಚಿವರು ತಿಳಿಸಿದ್ದಾರೆ.
ಪ್ರತಿವರ್ಷ ನಡೆಯಲಿರುವ ಪವಿತ್ರ ಹಜ್ ಯಾತ್ರೆಗಾಗಿ ಮೆಕ್ಕಾ ಮತ್ತು ಮದೀನಾಕ್ಕೆ ಕೋಟ್ಯಂತರ ಭಕ್ತರು ಪಾಲ್ಗೊಳ್ಳುತ್ತಾರೆ. ಆ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.