ಅಫ್ಘಾನಿಸ್ತಾನದ ಪೂರ್ವ ಭಾಗದ ಜಲಾಲಾಬಾದ್ನಲ್ಲಿರುವ ವಿದೇಶಿ ಮಿಲಿಟರಿ ಶಿಬಿರದ ಮೇಲೆ ಹಾಗೂ ಪ್ರಮುಖ ವಿಮಾನ ನಿಲ್ದಾಣದ ಮೇಲೆ ತಾಲಿಬಾನ್ ಬಂಡುಕೋರರು ದಾಳಿ ನಡೆಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸಾವು-ನೋವಿನ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ವಿಮಾನ ನಿಲ್ದಾಣದ ತುಂಬಾ ದಟ್ಟ ಹೊಗೆ ಆವರಿಸಿದ್ದು, ಸ್ಫೋಟದ ಶಬ್ದ ಕೇಳಿಸಿರುವುದಾಗಿ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಆತ್ಮಹತ್ಯಾ ಬಾಂಬರ್ ಈ ಕೃತ್ಯ ಎಸಗಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.
ವಿಮಾನ ನಿಲ್ದಾಣದ ಮೇಲೆ ದಾಳಿ ನಡೆದಿರುವುದನ್ನು ಪ್ರಾಂತೀಯ ಪೊಲೀಸ್ ಅಧಿಕಾರಿ ಓಬೈದುಲ್ಲಾ ತಲ್ವಾರ್ ಖಚಿತಪಡಿಸಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ವಿವರಣೆ ನೀಡಿಲ್ಲ. ಈ ದಾಳಿಯ ಹಿಂದೆ ಸುಮಾರು 14 ಆತ್ಮಹತ್ಯಾ ಬಾಂಬರ್ಗಳು ಪಾಲ್ಗೊಂಡಿರುವುದಾಗಿ ತಾಲಿಬಾನ್ ವಕ್ತಾರ ಜಾಬಿಹುಲ್ಲಾ ಮುಜಾಹಿದ್ ತಿಳಿಸಿದ್ದಾನೆ.