ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ್ ಮುಸ್ಲಿಮ್ ಲೀಗ್-ನವಾಜ್ (ಪಿಎಂಎಲ್-ಎನ್) ಪಕ್ಷದ ವರಿಷ್ಠರಾದ ನವಾಜ್ ಶರೀಫ್ ಅವರು 'ಹಿರಿಯರು' ಆ ನಿಟ್ಟಿನಲ್ಲಿ ಸರಕಾರವನ್ನು ಟೀಕಿಸಲು ಅವರಿಗೂ ಸರ್ವ ರೀತಿಯ ಹಕ್ಕಿದೆ ಎಂದು ಪಾಕಿಸ್ತಾನ ಪ್ರಧಾನಿ ಯೂಸೂಫ್ ರಾಜಾ ಗಿಲಾನಿ ತಿಳಿಸಿದ್ದಾರೆ.
ನಾವು ಅವರ ಟೀಕೆಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂಬುದಾಗಿಯೂ ಗಿಲಾನಿ ಲಾಹೋರ್‌ನಲ್ಲಿ ಹೇಳಿರುವುದಾಗಿ ಆನ್‌ಲೈನ್ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೆನೆಟರ್ ಗುಲ್‌ಜಾರ್ ಅಹ್ಮದ್ ಅವರ ಯೋಗಕ್ಷೇಮ ವಿಚಾರಿಸಲು ಗಿಲಾನಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿನ ಎಲ್ಲಾ ರಾಜಕೀಯ ಪಕ್ಷಗಳು ಒಬ್ಬರ ವಿರುದ್ಧ ಮತ್ತೊಬ್ಬರು ಕಾಲೆಳೆಯುವ ಚಟುವಟಿಕೆಯಲ್ಲೇ ನಿರತರಾಗಿದ್ದಾರೆ ಎಂದು ಆರೋಪಿಸಿದರು.
ಆ ನಿಟ್ಟಿನಲ್ಲಿ ಮಾಜಿ ಪ್ರಧಾನಿ ನವಾಜ್ ಶರೀಫ್ ಸೇರಿದಂತೆ ಯಾವುದೇ ರಾಜಕೀಯ ಮುಖಂಡರ ಆರೋಪಗಳನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.