ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ತಾಲಿಬಾನ್‌ಗೆ ಪಾಕ್‌ ಪ್ರಭಾವಿ ರಾಜಕಾರಣಿಗಳ ಕೃಪಾಕಟಾಕ್ಷ! (Tehrik-e-Taliban | JuD | politician | terrorist | parcel bomb)
Bookmark and Share Feedback Print
 
'ನಿಷೇಧಿತ ತೆಹ್ರೀಕ್ ಇ ತಾಲಿಬಾನ್ ಪಾಕಿಸ್ತಾನ್ ಉಗ್ರಗಾಮಿ ಸಂಘಟನೆಗೆ ಪಾಕಿಸ್ತಾನದ ಕೆಲವು ಪ್ರಭಾವಿ ರಾಜಕಾರಣಿಗಳೇ ಬೆಂಬಲ ನೀಡುತ್ತಿದ್ದಾರೆಂದು' ಇತ್ತೀಚೆಗಷ್ಟೇ ಪೊಲೀಸ್ ಕಚೇರಿಯೊಳಗೆ ಅಕ್ರಮವಾಗಿ ನುಸುಳಿ ಸ್ಫೋಟಕ ಇಡಲು ಯತ್ನಿಸುತ್ತಿರುವ ಸಂದರ್ಭದಲ್ಲಿಯೇ ಸೆರೆ ಸಿಕ್ಕ ಭಯೋತ್ಪಾದಕ ಸಂಘಟನೆ ಸಂಪರ್ಕ ಹೊಂದಿರುವ ಜೆಯುಡಿ ಉಗ್ರನೊಬ್ಬ ಈ ಮಾಹಿತಿಯನ್ನು ಹೊರಹಾಕಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಇಲ್ಲಿನ ಕ್ರೈಮ್ ಇನ್ವೆಸ್ಟಿಗೇಷನ್ ಏಜೆನ್ಸಿ ಕಚೇರಿಗೆ ಪಾರ್ಸೆಲ್ ಬಾಂಬ್ ದಾಳಿ ನಡೆಸಲು ಯತ್ನಿಸುತ್ತಿರುವ ಸಂದರ್ಭದಲ್ಲಿ ಮೊಹಮ್ಮದ್ ರಫೀಕ್ ಎಂಬಾತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ.

ರಫೀಕ್ ಜೆಯುಡಿ ಜತೆ ನಿಕಟ ಸಂಪರ್ಕ ಹೊಂದಿದ್ದಾನೆ. ಪಾಕಿಸ್ತಾನದ ಪ್ರಮುಖ ಗಣ್ಯ ಹಾಗೂ ಪ್ರಭಾವಶಾಲಿ ರಾಜಕಾರಣಿಗಳು ತಾಲಿಬಾನ್‌ಗೆ ಆರ್ಥಿಕ ನೆರವು ಸೇರಿದಂತೆ ಎಲ್ಲಾ ರೀತಿಯ ಬೆಂಬಲ ನೀಡುತ್ತಿರುವುದಾಗಿ ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ದಿ ನ್ಯೂಸ್ ಡೈಲಿ ವರದಿ ವಿವರಿಸಿದೆ.

ಸೆರೆ ಸಿಕ್ಕ ರಫೀಕ್ ತನಿಖಾಧಿಕಾರಿಗಳಿಗೆ ಉತ್ತಮ ರೀತಿಯಲ್ಲಿ ಸಹಕರಿಸುತ್ತಿದ್ದು, ಹಲವು ಮಹತ್ವದ ಮಾಹಿತಿಗಳನ್ನು ಹೊರಹಾಕಿರುವುದಾಗಿ ಮೂಲವೊಂದು ತಿಳಿಸಿರುವುದಾಗಿ ವರದಿ ಹೇಳಿದೆ. ಆ ನಿಟ್ಟಿನಲ್ಲಿ ದೇಶದಲ್ಲಿ ನಡೆದಿರುವ ಭಯೋತ್ಪಾದನಾ ದಾಳಿಯ ಹಿಂದೆ ಪ್ರಭಾವಶಾಲಿ ರಾಜಕಾರಣಿಗಳ ಕೈವಾಡ ಕೂಡ ಇದ್ದಂತಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ