ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » 2012ರ ಚುನಾವಣೆಯಲ್ಲಿ ಒಬಾಮರನ್ನ ಸೋಲಿಸ್ತೇನೆ: ಸಾರಾ (Sarah Palin | America | Obama | presidency | White House)
Bookmark and Share Feedback Print
 
ಅಮೆರಿಕದ ಅಧ್ಯಕ್ಷ ಪಟ್ಟಕ್ಕೆ 2012ರಲ್ಲಿ ನಡೆಯುವ ಚುನಾವಣೆಯಲ್ಲಿ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ತಾನು ಪರಾಭವಗೊಳಿಸುತ್ತೇನೆ ಎಂದು ರಿಪಬ್ಲಿಕನ್ ಪಕ್ಷದ ಸಾರಾ ಪಾಲಿನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2008ರಲ್ಲಿ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ರಿಪಬ್ಲಿಕನ್ ಪಕ್ಷದ ಸಾರಾ ಜಾನ್ ಮೆಕೈನ್ ವಿರುದ್ಧ ಸೋಲು ಅನುಭವಿಸಿದ್ದರು. ಆದರೆ 2012ರಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಾಗಿ ಹೇಳಿರುವ ಸಾರಾ, ತಾನು ಒಬಾಮ ಅವರನ್ನು ಸೋಲಿಸಿ ಶ್ವೇತಭವನ ಪ್ರವೇಶಿಸುವ ವಿಶ್ವಾಸ ಹೊಂದಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ತಮ್ಮ ಕುಟುಂಬ ವರ್ಗದ ಜೊತೆ ಚರ್ಚಿಸುವುದಾಗಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ. ಎಬಿಸಿ ನ್ಯೂಸ್ ಸಂದರ್ಶನದಲ್ಲಿ ಸಾರಾ ಈ ವಿಷಯ ಬಹಿರಂಗಪಡಿಸಿದ್ದಾರೆ.

2012ರ ಅಧ್ಯಕ್ಷೀಯ ಚುನಾವಣೆಯಲ್ಲಿ ಒಬಾಮ ಅವರನ್ನು ಸೋಲಿಸುತ್ತೀರಾ ಎಂಬ ಪ್ರಶ್ನೆಗೆ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. ಆ ನಿಟ್ಟಿನಲ್ಲಿ ಅಮೆರಿಕದ ಮುಂದಿನ ಅಧ್ಯಕ್ಷಗಾದಿ ಚುನಾವಣೆಗೆ ತಾನೂ ಸ್ಪರ್ಧಿ ಎಂಬುದನ್ನು ಬಹಿರಂಗವಾಗಿ ಘೋಷಿಸಿದಂತಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ