ಬಾಂಗ್ಲಾದೇಶದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಬಿಎಂ ಖೈರುಲ್ ಹಕ್ ಅವರ ಮನೆ ಮೇಲೆ ಎರಡು ಹ್ಯಾಂಡ್‌ಮೇಡ್ ಬಾಂಬ್ ದಾಳಿ ನಡೆಸಿರುವ ಘಟನೆ ನಡೆದಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಮಾಧ್ಯಮದ ವರದಿಯೊಂದು ತಿಳಿಸಿದೆ.
ಈ ಘಟನೆ ಗುರುವಾರ ರಾತ್ರಿ ನಡೆದಿರುವುದಾಗಿ ದಿ ಡೈಲಿ ಸ್ಟಾರ್ ವರದಿ ಮಾಡಿದೆ. ಅಪರಿಚಿತ ವ್ಯಕ್ತಿಗಳು ಮುಖ್ಯನ್ಯಾಯಮೂರ್ತಿ ಮನೆಯ ಮೇಲೆ ಬಾಂಬ್ ದಾಳಿ ನಡೆಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ವರದಿ ವಿವರಿಸಿದೆ.
ಬಾಂಬ್ ಸ್ಫೋಟ ಘಟನೆ ನಂತರ ಗೃಹ ಸಚಿವ ಸಾಹಾರಾ ಖಾಟುನ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿರುವುದಾಗಿ ಖಾಸಗಿ ಟಿವಿ ಚಾನೆಲ್ ಎಟಿಎನ್ ಬಾಂಗ್ಲಾ ವರದಿ ಮಾಡಿದೆ.