ಶ್ರೀಲಂಕಾ ಅಧ್ಯಕ್ಷ ಮಹೀಂದಾ ರಾಜಪಕ್ಸೆ ಶುಕ್ರವಾರ ಎರಡನೇ ಬಾರಿಗೆ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಧ್ಯಕ್ಷರ ಸಚಿವಾಲಯದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯನ್ಯಾಯಾಧೀಶ ಅಶೋಕಾ ಡಿ ಸಿಲ್ವಾ ಗೌಪ್ಯವಿಧಿ ಬೋಧಿಸಿದರು. 2010ರಲ್ಲಿ ಎರಡನೇ ಬಾರಿಗೆ ಅಧ್ಯಕ್ಷಗಾದಿಗೆ ನಡೆದ ಚುನಾವಣೆಯಲ್ಲಿ ರಾಜಪಕ್ಸೆ ಶೇ.57.81ರಷ್ಟು ಮತಪಡೆದು ಪುನರಾಯ್ಕೆಗೊಂಡಿದ್ದರು. ಆದರೆ ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಒಂಬತ್ತು ತಿಂಗಳ ನಂತರ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಅಧ್ಯಕ್ಷೀಯ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸ್ಥಳೀಯ ಹಾಗೂ ವಿದೇಶಿ ಗಣ್ಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಿಲಿಟರಿ ಪಡೆ ಪಥಸಂಚನ ನಡೆಸಿ ಗೌರವ ಸೂಚಿಸಿದೆ.