ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕಿಸ್ತಾನ: 3 ವರ್ಷದ ಹಿಂದು ಬಾಲಕಿ ಅಪಹರಣ (Hindu girl | Islamabad | Sindh province | police | Kashish)
Bookmark and Share Feedback Print
 
ಶಸ್ತ್ರಾಸ್ತ್ರಧಾರಿ ಅಪರಿಚಿತ ವ್ಯಕ್ತಿಯೊಬ್ಬ 3ರ ಹರೆಯದ ಬಾಲಕಿಯನ್ನು ಅಪಹರಿಸಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದ್ದು, ಮಗುವನ್ನು ಕೂಡಲೇ ಪತ್ತೆ ಹಚ್ಚಬೇಕೆಂದು ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

ಬುಧವಾರ ರಾತ್ರಿ ಸಿಂಧ್ ಪ್ರಾಂತ್ಯದ ಹಿಂದು ಮೊಹಲ್ಲಾದಿಂದ 3ರ ಹರೆಯದ ಅನ್‌ಚಾಲ್ ಎಂಬ ಬಾಲಕಿಯನ್ನು ಅಪಹರಿಸಲಾಗಿತ್ತು. ಇದೀಗ ಹಿಂದು ಸಂಘಟನೆ ಸದಸ್ಯರು ಪೊಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಮಾಧ್ಯಮದ ವರದಿಯೊಂದು ತಿಳಿಸಿದೆ.

ತನ್ನ ತಾಯಿ ಹಾಗೂ ಎಂಟರ ಹರೆಯದ ಅಕ್ಕ ಕಾಷಿಶ್ ಜತೆ ಅನ್‌ಚಾಲ್ ದೇವಸ್ಥಾನಕ್ಕೆ ಹೋದ ಸಂದರ್ಭದಲ್ಲೇ ಈ ಅಪಹರಣ ನಡೆದಿತ್ತು ಎಂದು ವರದಿ ವಿವರಿಸಿದೆ. ದೇವಸ್ಥಾನದ ಹೊರಭಾಗದಲ್ಲಿ ಪ್ರಸಾದ ತಿನ್ನುತ್ತಿರುವಾಗ ಮೋಟಾರ್ ಸೈಕಲ್‌ನಲ್ಲಿ ಆಗಮಿಸಿದ್ದ ಶಸ್ತ್ರಾಸ್ತ್ರಧಾರಿ ವ್ಯಕ್ತಿ ಮಗುವನ್ನು ಅಪಹರಿಸಿಕೊಂಡು ಹೋಗಿರುವುದಾಗಿ ತಂದೆ ಗಣೇಶ್ ಚಾಂದ್ ಟಿವಿ ಚಾನೆಲ್‌ವೊಂದಕ್ಕೆ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ