ಇಸ್ಲಾಮಾಬಾದ್, ಮಂಗಳವಾರ, 7 ಡಿಸೆಂಬರ್ 2010( 19:57 IST )
ದಕ್ಷಿಣ ವಜಿರಿಸ್ತಾನ ಬುಡಕಟ್ಟು ಪ್ರದೇಶದಲ್ಲಿ ಪಾಕಿಸ್ತಾನ ಮಿಲಿಟರಿ ವರಿಷ್ಠ ಜನರಲ್ ಅಶ್ಫಾಕ್ ಪರ್ವೆಜ್ ಕಯಾನಿ ಮೇಲೆ ಮಂಗಳವಾರ ತಾಲಿಬಾನ್ ಉಗ್ರರು ರಾಕೆಟ್ ದಾಳಿ ನಡೆಸಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಮಾಧ್ಯಮವೊಂದರ ವರದಿ ತಿಳಿಸಿದೆ.
ಇಲ್ಲಿನ ಲಾಡ್ಡಾ ಪ್ರದೇಶದಿಂದ ತೆರಳಿದ ಕೂಡಲೇ ತಾಲಿಬಾನ್ ಉಗ್ರರು ಏಕಕಾಲದಲ್ಲಿ ನಾಲ್ಕು ರಾಕೆಟ್ ದಾಳಿ ನಡೆಸಿರುವುದಾಗಿ ಜಿಯೋ ನ್ಯೂಸ್ ವರದಿ ಮಾಡಿದೆ. ಆದರೆ ಕಯಾನಿ ಅವರು ಅಪಾಯದಿಂದ ಪಾರಾಗಿರುವುದಾಗಿ ವಿವರಿಸಿದೆ.
ತಾಲಿಬಾನ್ ಉಗ್ರರು ರಾಕೆಟ್ ದಾಳಿ ನಡೆಸಿದ ಬೆನ್ನಲ್ಲೇ ಭದ್ರತಾ ಪಡೆಗಳು ಕೂಡ ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ್ದು, ಈ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಆದರೆ ಕಯಾನಿ ಮೇಲೆ ರಾಕೆಟ್ ದಾಳಿ ನಡೆದ ಬಗ್ಗೆ ಅಧಿಕಾರಿಗಳು ಖಚಿತಪಡಿಸಿಲ್ಲ ಎಂದು ವರದಿ ತಿಳಿಸಿದೆ.