ಮಾಜಿ ಪ್ರಧಾನಿ ಬೆನಜೀರ್ ಭುಟ್ಟೋ ಅವರನ್ನು ಮಾಜಿ ಅಧ್ಯಕ್ಷ ಪರ್ವೆಜ್ ಮುಷರ್ರಫ್ ಅವರೇ ಹತ್ಯೆಗೈದಿರುವುದಾಗಿ ಆಡಳಿತಾರೂಢ ಪಿಪಿಪಿ ಪ್ರಧಾನ ಕಾರ್ಯದರ್ಶಿ ಜಹಾಂಗೀರ್ ಬಾದಾರ್ ಆರೋಪಿಸಿದ್ದಾರೆ.
ಭುಟ್ಟೋ ಅವರ ಛಾಯಾಚಿತ್ರ ಪ್ರದರ್ಶನ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. 2007 ಡಿಸೆಂಬರ್‌ನಲ್ಲಿ ರಾವಲ್ಪಿಂಡಿಯಲ್ಲಿ ಭುಟ್ಟೋ ಅವರನ್ನು ಹತ್ಯೆಗೈಯಲಾಗಿತ್ತು.
ಭುಟ್ಟೋ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತ ಈಗಾಗಲೇ ಹಲವು ಜನರನ್ನು ಬಂಧಿಸಲಾಗಿದೆ. ಅಲ್ಲದೇ ಇನ್ನೂ ಕೆಲವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪಿಪಿಪಿ ವಕ್ತಾರ ಫೌಜಿಯ ವಾಹಾಬ್ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಬೆನಜೀರ್ ಹತ್ಯೆ ಕೇವಲ ಸಾಮಾನ್ಯ ಕೊಲೆಯಲ್ಲ, ಇದೊಂದು ವ್ಯವಸ್ಥಿತ ಸಂಚು ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯವ್ಯಕ್ತಪಡಿಸಿದರು.