ವಿಶ್ವಸಂಸ್ಥೆ, ಶನಿವಾರ, 18 ಡಿಸೆಂಬರ್ 2010( 15:29 IST )
ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಸಂರಕ್ಷಣೆಗೆ ಭಾರತ ಅಗತ್ಯ ಕ್ರಮಕೈಗೊಳ್ಳುತ್ತಿದೆ ಎಂದು ವಿಶ್ವಸಂಸ್ಥೆ ಮಹಾ ಕಾರ್ಯದರ್ಶಿ ಬಾನ್ ಕಿ ಮೂನ್ ತೃಪ್ತಿ ವ್ಯಕ್ತಪಡಿಸಿದ್ದಾರೆ.
ಭದ್ರತೆ ಖಾತ್ರಿಪಡಿಸುವುದು ಹಾಗೂ ಹಿಂಸಾಚಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಾರತ ಸರಕಾರ ಕೈಗೊಳ್ಳುತ್ತಿರುವ ನೀತಿಯು ಶ್ಲಾಘನೀಯ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಾರ್ಷಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಶ್ಮೀರ ಸಮಸ್ಯೆ ಸೇರಿದಂತೆ ಹಲವು ವಿಷಯಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಮಾತುಕತೆ ನಡೆಯುತ್ತಿರುವುದು ಉತ್ತಮ ವಿಚಾರ ಎಂದಿದ್ದಾರೆ.
ಈ ಬಗ್ಗೆ ಭಾರತ ಸರಕಾರದ ಮುಖಂಡರರು ಅವರೊಳಗೆಯೇ ಚರ್ಚೆ ನಡೆಸುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ. ಆ ಮೂಲಕ ಮಾನವ ಹಕ್ಕುಗಳ ಸಂರಕ್ಷಣೆ ನಡೆಯುತ್ತಿದೆ ಎಂದವರು ತಿಳಿಸಿದರು.
ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ನಡೆಯುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಬಾನ್ ಸ್ಪಷ್ಟನೆ ನೀಡಿದ್ದು, ನನ್ನ ವಕ್ತಾರನೇ ಈ ಬಗ್ಗೆ ಹಲವು ಬಾರಿ ಸ್ಪಷ್ಟನೆ ನೀಡಿದ್ದಾರೆ ಎಂದು ಉತ್ತರಿಸಿದರು.