ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಮಾಜಿ ಅಧ್ಯಕ್ಷ ಮೋಶೆ ಕಸಾವ್ ಅಪರಾಧಿ ಎಂದು ಇಲ್ಲಿನ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಇಸ್ರೇಲ್ ಮಾಜಿ ಅಧ್ಯಕ್ಷ ಮೋಶೆ ದೋಷಿ ಎಂದು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಅವರು ಕನಿಷ್ಠ ನಾಲ್ಕುವರ್ಷಗಳ ಜೈಲುಶಿಕ್ಷೆ ಅನುಭವಿಸಬೇಕಾಗಲಿದೆ. ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಈ ಪ್ರಕರಣ ಕಳೆದ ನಾಲ್ಕುವರೆ ವರ್ಷಗಳ ಕಾಲ ವಿಚಾರಣೆ ನಡೆದು ಅಂತಿಮ ತೀರ್ಪು ಹೊರಬಿದ್ದಂತಾಗಿದೆ.
65ರ ಹರೆಯದ ಕಸಾವ್ ಇದೀಗ ಸೆಕ್ಸ್ ಕ್ರೈಮ್ ಅಪರಾಧಿ ಸ್ಥಾನದಲ್ಲಿ ನಿಂತಿದ್ದಾರೆ. ಅಲ್ಲದೇ ಪ್ರಕರಣದಲ್ಲಿ ಇಬ್ಬರು ಮಾಜಿ ಅಧಿಕಾರಿಗಳೂ ಕೂಡ ಶಾಮೀಲಾಗಿದ್ದಾರೆ. ಅವರ ಮೇಲಿನ ಆರೋಪದ ಕುರಿತು ನ್ಯಾಯಾಲಯ ತನ್ನ ತೀರ್ಪು ಹೊರಹಾಕಲಿದೆ.
ಅತ್ಯಾಚಾರ ಪ್ರಕರಣ ದೇಶಾದ್ಯಂತ ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ಇದರಿಂದಾಗಿ 2007ರಲ್ಲಿ ಕಸಾವ್ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ನಂತರ ಶಿಮೋನ್ ಪೆರೆಸ್ ಅಧ್ಯಕ್ಷ ಪಟ್ಟಕ್ಕೆ ಏರಿದ್ದರು.