ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಜಿಯಾ ಪುತ್ರನ ಬಿಡುಗಡೆ ಸಾಧ್ಯವಿಲ್ಲ: ಬಾಂಗ್ಲಾ ಕೋರ್ಟ್ (Bangladesh court | Khaleda Zia | Tarique Rahman | money-laundering case,)
Bookmark and Share Feedback Print
 
ಹಣ ದುರುಪಯೋಗ ಪ್ರಕರಣದಲ್ಲಿ ಸೆರೆವಾಸ ಅನುಭವಿಸುತ್ತಿರುವ ಮಾಜಿ ಪ್ರಧಾನಿ ಖಾಲೀದಾ ಜಿಯಾ ಪುತ್ರ ತಾರೀಕ್ ರಹಮಾನ್‌ ಬಿಡುಗಡೆ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಗ್ಲಾದೇಶ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ತಾರೀಕ್ ವಿರುದ್ಧದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯನ್ನು ಕೋರ್ಟ್ ವಜಾಗೊಳಿಸಿರುವುದಾಗಿ ಮಾಧ್ಯಮದ ವರದಿಯೊಂದು ತಿಳಿಸಿದೆ.

ತಾರೀಕ್ ಹಾಗೂ ಆತನ ವ್ಯವಹಾರದ ಪಾರ್ಟನರ್ ಜಿಯಾಸುದ್ದಿನ್ ಅಲ್ ಮಾಮುನ್ ವಿರುದ್ಧ 204.1 ಮಿಲಿಯನ್ ಹಣ ದುರುಪಯೋಗ ಕುರಿತಂತೆ ಬಾಂಗ್ಲಾದೇಶ್ ಭ್ರಷ್ಟಾಚಾರ ನಿಗ್ರಹ ಆಯೋಗ 2009 ಅಕ್ಟೋಬರ್ 26ರಂದು ಢಾಕಾ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಿಸಿದ್ದರು. ಅಲ್ಲದೇ ಆಯೋಗ ಆರೋಪಪಟ್ಟಿಯನ್ನೂ ಸಲ್ಲಿಸಿತ್ತು.

2009 ಸೆಪ್ಟೆಂಬರ್ 29ರಂದು ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿ, ಸಂವಿಧಾನಾತ್ಮಕವಾಗಿ ಈ ಅರ್ಜಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿತ್ತು.
ಸಂಬಂಧಿತ ಮಾಹಿತಿ ಹುಡುಕಿ