ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್ ಮಿನಿಬಸ್‌ನಲ್ಲಿ ಸಿಲಿಂಡರ್ ಸ್ಫೋಟ; 16 ಬಲಿ (Pakistan | gas blast | Police | Sixteen killed | Abdul Rashid)
Bookmark and Share Feedback Print
 
ಮಿನಿ ಬಸ್‌ನಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಸುಮಾರು 16 ಮಂದಿ ಸಾವನ್ನಪ್ಪಿದ್ದು, 11 ಜನರು ಗಾಯಗೊಂಡಿರುವ ಘಟನೆ ಸೋಮವಾರ ಪಾಕಿಸ್ತಾನದ ವಾಯುವ್ಯ ನಗರದಲ್ಲಿ ಸಂಭವಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇಲ್ಲಿನ ವಾಯುವ್ಯ ಪ್ರದೇಶದ ಹಾಂಗ್ಯೂ ನಗರ ಸಮೀಪದ ಜಾವಾರ್ಜಾ ಎಂಬಲ್ಲಿ ಟ್ರಕ್‌ವೊಂದು ಪ್ರಯಾಣಿಕರ ಮಿನಿಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಏಕಾಏಕಿ ಸಂಭವಿಸಿದ ಸ್ಫೋಟದಿಂದಾಗಿ ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಕೂಡ ಭೇಟಿ ನೀಡಿ ತನಿಖೆ ನಡೆಸಿತ್ತು. ಆದರೆ ಎರಡು ವಾಹನಗಳ ಡಿಕ್ಕಿಯಿಂದಾಗಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿರುವುದಾಗಿ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಪಾಕಿಸ್ತಾನದಲ್ಲಿ ಹೆಚ್ಚಿನ ವಾಹನಗಳು ಗ್ಯಾಸ್ ಅಳವಡಿಸುತ್ತವೆ. ಘಟನೆಯಲ್ಲಿ 16 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ