ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಉಗ್ರ ಮುಲ್ಲಾಗೆ ಶಸ್ತ್ರಚಿಕಿತ್ಸೆ ವರದಿ ಸುಳ್ಳು; ಪಾಕಿಸ್ತಾನ (Mullah Omar | Taliban | ISI | US | Husain | Laden)
Bookmark and Share Feedback Print
 
ಹೃದಯಾಘಾತಕ್ಕೆ ಒಳಗಾಗಿದ್ದ ಅಫ್ಘಾನಿಸ್ತಾನದ ತಾಲಿಬಾನ್ ಒಕ್ಕಣ್ಣ ಮುಖಂಡ ಮುಲ್ಲಾ ಓಮರ್‌ಗೆ ಕರಾಚಿಯ ಆಸ್ಪತ್ರೆಯಲ್ಲಿ ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ಐ ನೆರವಿನೊಂದಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂಬ ಮಾಧ್ಯಮದ ವರದಿ ಸತ್ಯಕ್ಕೆ ದೂರವಾದದ್ದು ಎಂದು ಅಮೆರಿಕದಲ್ಲಿನ ಪಾಕ್ ರಾಯಭಾರಿ ಹುಸೈನ್ ಹಕ್ಕಾನಿ ಸ್ಪಷ್ಟನೆ ನೀಡಿದ್ದಾರೆ.

ಕೆಲವೊಮ್ಮೆ ಗುಪ್ತಚರ ಇಲಾಖೆಯಿಂದ ಖಾಸಗಿ ಪತ್ತೆದಾರರು ಪಡೆದ ಮಾಹಿತಿಯನ್ನು ತಿರುಚುತ್ತಿರುವುದಾಗಿ ಹಕ್ಕಾನಿ ಹೇಳಿಕೆಯನ್ನು ಉಲ್ಲೇಖಿಸಿ ಡಾನ್ ಪತ್ರಿಕೆ ವರದಿ ಮಾಡಿದೆ. ಖಾಸಗಿ ಗುಪ್ತಚರ ಸಂಸ್ಥೆಯ ಮಾಹಿತಿ ಆಧಾರದ ಮೇಲೆ ಮಾಧ್ಯಮವೊಂದರಲ್ಲಿ ಪ್ರಕಟವಾದ ವರದಿಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಪಾಕಿಸ್ತಾನಕ್ಕೆ ಕೆಟ್ಟ ಹೆಸರು ತರಲು ಇಚ್ಚಿಸುವ ಮಂದಿ ಇಂತಹ ಸುದ್ದಿಯನ್ನು ನೀಡುತ್ತಿರುವುದಾಗಿ ಹಕ್ಕಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2001ರಲ್ಲಿಯೂ ಕೂಡ ಅಲ್ ಖಾಯಿದಾ ವರಿಷ್ಠ ಒಸಾಮಾ ಬಿನ್ ಲಾಡೆನ್‌ಗೆ ಪಾಕಿಸ್ತಾನದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಮೆರಿಕದ ಗುಪ್ತಚರ ಇಲಾಖೆಯ ಮಾಹಿತಿ ಸಂಗ್ರಹಿಸಿ ಮಾಧ್ಯಮವೊಂದು ವರದಿ ಮಾಡಿತ್ತು. ಆದರೆ ಆ ವರದಿ ನಿಜಕ್ಕೂ ಸುಳ್ಳಾಗಿತ್ತು ಎಂದು ಹೇಳಿದರು.

ಅದೇ ರೀತಿ ವಾಷಿಂಗ್ಟನ್ ಪೋಸ್ಟ್ ಪತ್ರಿಕೆ ಕೂಡ ಮುಲ್ಲಾ ಓಮರ್‌ ಹೃದಯಾಘಾತಕ್ಕೆ ಒಳಗಾಗಿದ್ದು, ಆತನನ್ನು ಐಎಸ್ಐ ಕರಾಚಿಯ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲು ಅನುಕೂಲ ಕಲ್ಪಿಸಿಕೊಟ್ಟಿದೆ ಎಂದು ವರದಿ ಮಾಡಿದೆ. ಇದು ಸಂಪೂರ್ಣ ಸುಳ್ಳು ಮಾಹಿತಿ ಎಂದು ಹಕ್ಕಾನಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ