ವಾಯುವ್ಯ ಪಾಕಿಸ್ತಾನದಲ್ಲಿ ಮಂಗಳವಾರ ಉಚಿತ ಆಹಾರ ಸ್ವೀಕರಿಸುತ್ತಿದ್ದ ಜನಸಂದಣಿಯ ಮೇಲೆ ಶಂಕಿತ ಭಯೋತ್ಪಾದಕರಿಂದ ನಡೆದ ದಾಳಿಯಲ್ಲಿ ಕನಿಷ್ಠ 42 ಮಂದಿ ಸಾವನ್ನಪ್ಪಿದ್ದು, ಸುಮಾರು 70 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಖೈರ್ ನಗರದಲ್ಲಿ ಬಜಾರ್ ಸಂಸ್ಥೆಯಿಂದ ಆಯೋಜಿಸಿದ್ದ ವಿಶ್ವ ಆಹಾರ ಯೋಜನಾ ವಿತರಣೆ ಕಾರ್ಯಕ್ರಮ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಸಾಂಪ್ರದಾಯಿಕ ಬುರ್ಖಾ ಧರಿಸಿದ್ದ ಮಹಿಳೆ ಏಕಾಏಕಿ ಜನರ ಗುಂಪಿನ ಮೇಲೆ ಪ್ರವೇಶಿಸಿ ಬಾಂಬ್ ಸ್ಫೋಟಿಸಿರುವುದಾಗಿ ತಿಳಿದುಬಂದಿದೆ. ಘಟನೆಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ.