ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕಿಸ್ತಾನಕ್ಕೆ ಹೋಗ್ಬೇಡಿ: ಪ್ರಜೆಗಳಿಗೆ ಅಮೆರಿಕ ಎಚ್ಚರಿಕೆ (Pakistan | US to citizens | al Qaeda | Taliban | warned)
ಪಾಕಿಸ್ತಾನದಲ್ಲಿ ಅಲ್ ಖಾಯಿದಾ, ತಾಲಿಬಾನ್ ಹಾಗೂ ಕೆಲವು ಉಗ್ರರ ಗುಂಪುಗಳು ಸಂಭಾವ್ಯ ದಾಳಿ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅಮೆರಿಕದ ಪ್ರಜೆಗಳು ಪಾಕ್‌ಗೆ ಪ್ರಯಾಣ ಬೆಳೆಸದಂತೆ ಎಚ್ಚರಿಕೆ ನೀಡಿದೆ.

ಪಾಕಿಸ್ತಾನ ಸರಕಾರ ಈಗಾಗಲೇ ಪ್ರಮುಖ ನಗರಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಿದೆ ಎಂದು ಹೇಳಿರುವ ಅಮೆರಿಕ, ಇದು ಅಮೆರಿಕ ಪ್ರಜೆಗಳ ಮೇಲೆ ಅವಕಾಶ ಸಿಕ್ಕಲ್ಲಿ ಉಗ್ರರು ಮತ್ತೆ ದಾಳಿ ನಡೆಸಲಿದ್ದಾರೆ ಎಂಬ ಸೂಚನೆಯಾಗಿದೆ ಎಂದು ತಿಳಿಸಿದೆ.

ಆ ನಿಟ್ಟಿನಲ್ಲಿ ಶಾಪಿಂಗ್ ಪ್ರದೇಶ, ಹೋಟೆಲ್ಸ್, ಕ್ಲಬ್ಸ್, ರೆಸ್ಟೋರೆಂಟ್ಸ್ ಹಾಗೂ ಪ್ರಮುಖ ಸ್ಥಳಗಳಲ್ಲಿ ಅಮೆರಿಕ ಮತ್ತು ವಿದೇಶಿ ಪ್ರಜೆಗಳ ಮೇಲೆ ಉಗ್ರರು ದಾಳಿ ನಡೆಸುವ ಸಂಚು ರೂಪಿಸಿರುವುದಾಗಿ ಅಮೆರಿಕ ಹೇಳಿದೆ. ಆ ನಿಟ್ಟಿನಲ್ಲಿ ಭಯೋತ್ಪಾದಕರು ದಾಳಿ ನಡೆಸಲು ಉದ್ದೇಶಿಸಿರುವ ಸ್ಥಳಗಳಲ್ಲಿ ಪ್ರವೇಶಿಸಲು ಅನುವು ಮಾಡಿಕೊಡಬೇಕೆಂದು ಪಾಕಿಸ್ತಾನದ ಭದ್ರತಾ ಪಡೆಗಳ ಸಿಬ್ಬಂದಿ ಜತೆ ಮಾತುಕತೆ ನಡೆಸಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿರುವುದಾಗಿ ಅಮೆರಿಕ ವಿವರಿಸಿದೆ.

ಆ ನೆಲೆಯಲ್ಲಿ ಪೇಶಾವರ, ಕರಾಚಿ ಸೇರಿದಂತೆ ಪ್ರಮುಖ ನಗರಗಳಿಗೆ ತೆರಳದಂತೆ ಅಮೆರಿಕ ತನ್ನ ಪ್ರಜೆಗಳಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಅಲ್ಲದೇ ಲಾಹೋರ್ ಹಾಗೂ ಇಸ್ಲಾಮಾಬಾದ್‌ನಲ್ಲಿರುವ ಅಮೆರಿಕದ ಅಧಿಕಾರಿಗಳು ಈ ನಿರ್ಬಂಧವನ್ನು ವಿಧಿಸಿದ್ದು, ಪಾಕಿಸ್ತಾನದಲ್ಲಿರುವ ಅಮೆರಿಕ ಪ್ರಜೆಗಳು ಸಾರ್ವಜನಿಕ ಮಾರುಕಟ್ಟೆ, ರೆಸ್ಟೋರೆಂಟ್ಸ್ ಹಾಗೂ ಇನ್ನಿತರ ಪ್ರದೇಶಗಳಲ್ಲಿ ತುಂಬಾ ಸಮಯ ಕಳೆಯುವುದನ್ನು ಕೈಬಿಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಇವನ್ನೂ ಓದಿ