ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಭುಟ್ಟೋ ಹತ್ಯಾ ಪ್ರಕರಣ; ಮುಷ್ ತಲೆಮರೆಸಿಕೊಂಡ ಆರೋಪಿ (Pervez Musharraf | Benazir Bhutto | assassination | court | FIA)
PTI
ಪಾಕಿಸ್ತಾನದ ಮಾಜಿ ಪ್ರಧಾನಿ ಬೆನಜೀರ್ ಭುಟ್ಟೋ ಅವರ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಪರ್ವೇಜ್ ಮುಷರ್ರಫ್ ಅವರನ್ನು ತಲೆಮರೆಸಿಕೊಂಡ ಆರೋಪಿ ಎಂದು ಘೋಷಿಸುವಂತೆ ಪಾಕ್ ಪ್ರಾಸಿಕ್ಯೂಟರ್ ಸೋಮವಾರ ಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದಾರೆ.

ಅಲ್ಲದೇ ಮುಷರ್ರಫ್ ಅವರು ಭುಟ್ಟೋ ಹತ್ಯಾ ಪ್ರಕರಣದ ತನಿಖೆಗೆ ಸಹಕರಿಸಲು ಮತ್ತು ಪ್ರಕರಣದಲ್ಲಿ ಆರೋಪಿ ಎಂದು ದಾಖಲಿಸಲು ನಿರಾಕರಿಸುತ್ತಿದ್ದಾರೆ ಎಂದು ಕೋರ್ಟ್ ಗಮನಕ್ಕೆ ತಂದಿದ್ದಾರೆ.

ಇಂದು ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ ರಾವಲ್ಪಿಂಡಿಯ ಭಯೋತ್ಪಾದನಾ ನಿಗ್ರಹ ಕೋರ್ಟ್‌ಗೆ ಮಧ್ಯಂತರ ಚಾರ್ಜ್‌ಶೀಟ್ ಸಲ್ಲಿಸಿದ್ದು, ಭುಟ್ಟೋ ಹತ್ಯೆ ನಡೆದಾಗ ಮುಷರ್ರಫ್ ಅವರು ಅಧ್ಯಕ್ಷರಾಗಿದ್ದರು. ಆದರೆ ಪ್ರಕರಣದ ತನಿಖೆಗೆ ಸಹಕರಿಸಲು ಅವರು ನಿರಾಕರಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಆ ನಿಟ್ಟಿನಲ್ಲಿ ಭುಟ್ಟೋ ಹತ್ಯಾ ಪ್ರಕರಣದಲ್ಲಿ ಪರ್ವೇಜ್ ಮುಷರ್ರಫ್ ಅವರು ತಲೆಮರೆಸಿಕೊಂಡ ಆರೋಪಿ ಎಂದು ಆರೋಪಪಟ್ಟಿಯಲ್ಲಿ ದಾಖಲಿಸಲಾಗಿದೆ ಎಂದು ಎಫ್ಐಎ ಪ್ರಾಸಿಕ್ಯೂಟರ್ ಚೌಧರಿ ಜುಲ್ಫಿಕರ್ ಕೋರ್ಟ್‌ಗೆ ವಿವರಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿಯೂ ಮುಷರ್ರಫ್ ಅವರು ತನಿಖೆಗೆ ಸಹಕರಿಸಲು ನಿರಾಕರಿಸುತ್ತಿರುವುದಾಗಿ ಪ್ರಾಸಿಕ್ಯೂಟರ್ ಆರೋಪಿಸಿರುವುದಾಗಿ ಟಿವಿ ನ್ಯೂಸ್ ಚಾನೆಲ್‌ಗಳ ವರದಿ ತಿಳಿಸಿದೆ.
ಇವನ್ನೂ ಓದಿ