ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಭುಟ್ಟೋ ಹತ್ಯೆ; ಮುಷ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ (Pervez Musharraf | Benazir Bhutto | assassination | non-bailable warrant)
PTI
ಮಾಜಿ ಪ್ರಧಾನಿ ಬೆನಜೀರ್ ಭುಟ್ಟೋ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಕೋರ್ಟ್ ಶನಿವಾರ ಮಾಜಿ ಅಧ್ಯಕ್ಷ ಪರ್ವೆಜ್ ಮುಷರ್ರಫ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.

ಪ್ರಕರಣದ ಕುರಿತಂತೆ ಮುಷರ್ರಫ್ ಅವರು ಫೆಬ್ರುವರಿ 19ರೊಳಗೆ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ರಾವಲ್ಪಿಂಡಿಯ ಭಯೋತ್ಪಾದನಾ ನಿಗ್ರಹ ಕೋರ್ಟ್ ಆದೇಶ ನೀಡಿದೆ.

2007 ಡಿಸೆಂಬರ್ 27ರಂದು ರಾವಲ್ಪಿಂಡಿಯಲ್ಲಿ ಮಾಜಿ ಪ್ರಧಾನಿ ಬೆನಜೀರ್ ಭುಟ್ಟೋ ಅವರು ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಂತರ ಲಿಯಾಖತ್ ಬಾಗ್‌ನಿಂದ ಹೊರಟ ಸಂದರ್ಭದಲ್ಲಿ ಗುಂಡಿಟ್ಟು ಹತ್ಯೆಗೈಯಲಾಗಿತ್ತು. ಭುಟ್ಟೋ ಅವರನ್ನು ಹತ್ಯೆಗೈಯಲು ಗುರಿಯನ್ನಿಟ್ಟಿದ್ದ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬನ ದೃಶ್ಯ ಸಿಸಿ ಟಿವಿಯಲ್ಲಿ ದಾಖಲಾಗಿದೆ. ಈ ಸಂದರ್ಭದಲ್ಲಿ ಪ್ರಬಲ ಬಾಂಬ್ ಸ್ಫೋಟಿಸಿದ ಪರಿಣಾಮ 24 ಮಂದಿ ಬಲಿಯಾಗಿದ್ದರು.

ಪ್ರಕರಣದ ಕುರಿತು ಎಫ್‌ಬಿಐ ಮತ್ತು ಪಾಕಿಸ್ತಾನ ಪೊಲೀಸರು ಜಂಟಿಯಾಗಿ ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಬೆನಜೀರ್ ಹತ್ಯಾ ಪ್ರಕರಣದಲ್ಲಿ ಮುಷರ್ರಫ್ ಅವರು ತಲೆಮರೆಸಿಕೊಂಡ ಆರೋಪಿ ಎಂದು ಫೆಬ್ರುವರಿ 7ರಂದು ಕೋರ್ಟ್‌ಗೆ ತನಿಖಾ ತಂಡ ಜಾರ್ಜ್‌ಶೀಟ್ ಸಲ್ಲಿಸಿದೆ. ಮುಷರ್ರಫ್ ಅವರು ತನಿಖೆಗೆ ಸಹಕಾರ ನೀಡಲು ನಿರಾಕರಿಸುತ್ತಿದ್ದು, ಅವರನ್ನು ಆರೋಪಪಟ್ಟಿಯಲ್ಲಿ ಆರೋಪಿಯನ್ನಾಗಿ ಸೇರಿಸಲಾಗಿದೆ ಎಂದು ಪ್ರಾಸಿಕ್ಯೂಟರ್ ಕೋರ್ಟ್‌ಗೆ ವಿವರಣೆ ನೀಡಿದ್ದರು.
ಇವನ್ನೂ ಓದಿ