ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್‌ನಲ್ಲಿ ಪ್ರಜಾಪ್ರಭುತ್ವದ ಹಾದಿತಪ್ಪಿಸಲ್ಲ: ಜರ್ದಾರಿ (democracy | Asif Ali Zardari | Pakistan | Karachi | Punjab,)
ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಯಾವುದೇ ಕಾರಣಕ್ಕೂ ಧಕ್ಕೆ ಬರುವುದಿಲ್ಲ ಎಂದು ವಿಶ್ವಾಸವ್ಯಕ್ತಪಡಿಸಿರುವ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ, ಅಲ್ಲದೇ ಆಡಳಿತಾರೂಢ ಪಿಪಿಪಿ ಕೂಡ ಸಂವಿಧಾನದ ಮೇಲೆ ನಂಬಿಕೆ ಹೊಂದಿದ್ದು ಪ್ರಜಾಪ್ರಭುತ್ವದ ಹಳಿತಪ್ಪಿಸುವ ಕೆಲಸಕ್ಕೆ ಎಂದಿಗೂ ಮುಂದಾಗುವುದಿಲ್ಲ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿಯೇ ಸಾಮೂಹಿಕವಾಗಿ ದೇಶದ ಏಳಿಗೆಗೆ ಪಿಪಿಪಿ ನಿಷ್ಪಕ್ಷಪಾತವಾಗಿ ಬೆಂಬಲವನ್ನು ನೀಡಲಿದೆ ಎಂದ ಅವರು, ಪ್ರಸಕ್ತ ದೇಶದಲ್ಲಿನ ಪ್ರಜಾಪ್ರಭುತ್ವ ಆಡಳಿತ ಗಣತಂತ್ರ ವ್ಯವಸ್ಥೆಯ ಹಾದಿ ತಪ್ಪಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಅಲ್ಲದೇ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಅಧಿಕಾರಕ್ಕಾಗಿ ಕುದುರೆ ವ್ಯಾಪಾರ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದ್ದು, ಇದು ಪ್ರಜಾಪ್ರಭುತ್ವದ ನೀತಿ ಸಂಹಿತೆಯ ಉಲ್ಲಂಘನೆಯಾಗಲಿದೆ ಎಂದು ತಿಳಿಸಿದರು.
ಇವನ್ನೂ ಓದಿ