ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕಿಸ್ತಾನ ಅಣ್ವಸ್ತ್ರದ ಮೇಲೆ ಉಗ್ರರ ಕಣ್ಣು: ಅಮೆರಿಕ (nuclear weapons | Pakistan | Afghanistan | Taliban | Petraeus,)
ಉಪಖಂಡದಲ್ಲಿನ ಹಲವು ಭಯೋತ್ಪಾದಕ ಸಂಘಟನೆಗಳು ಪಾಕಿಸ್ತಾನದಲ್ಲಿ ಇರುವ ಅಣ್ವಸ್ತ್ರಗಳ ಮೇಲೆ ಕಣ್ಣಿಟ್ಟಿರುವುದಾಗಿ ಅಮೆರಿಕದ ಕಮಾಂಡರ್‌ ಒಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ. ಆ ನಿಟ್ಟಿನಲ್ಲಿ ಪಾಕ್ ಈ ಅಣ್ವಸ್ತ್ರಗಳ ರಕ್ಷಣೆಗೆ ಹೆಚ್ಚಿನ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ದೇಶದಲ್ಲಿರುವ ನ್ಯೂಕ್ಲಿಯರ್ ಶಸ್ತ್ರಾಸ್ತ್ರಗಳ ರಕ್ಷಣೆಗೆ ಬಗ್ಗೆ ಪಾಕಿಸ್ತಾನ ಹೆಚ್ಚಿನ ನಿಗಾ ವಹಿಸಬೇಕು ಎಂದು ಅಫ್ಘಾನಿಸ್ತಾನದಲ್ಲಿನ ಅಮೆರಿಕ ಮತ್ತು ನ್ಯಾಟೋ ಪಡೆ ಕಮಾಂಡರ್ ಜನರಲ್ ಡೇವಿಡ್ ಪೀಟರ್ಸ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನಿ ತಾಲಿಬಾನ್ ಹಾಗೂ ಇನ್ನಿತರ ಉಗ್ರಗಾಮಿ ಸಂಘಟನೆಗಳು ಒಂದರ ಜತೆಗೊಂದು ನಿಕಟ ಸಂಪರ್ಕ ಹೊಂದಿದ್ದು, ಭಾರೀ ಪ್ರಮಾಣದಲ್ಲಿ ದಾಳಿ ನಡೆಸಲು ಚಿಂತಿಸುತ್ತಿರುವ ಸಂಘಟನೆಗಳು ಹೇಗಾದರೂ ಮಾಡಿ ಅಣ್ವಸ್ತ್ರಗಳನ್ನು ತಮ್ಮ ವಶಕ್ಕೆ ತೆಗೆದುಕೊಳ್ಳಬೇಕೆಂಬ ಹವಣಿಕೆಯಲ್ಲಿರುವುದಾಗಿ ಹೇಳಿದ್ದಾರೆ.

ಅದೇ ಅಫ್ಘಾನಿಸ್ತಾನದಲ್ಲಿ ಈಗಾಗಲೇ ಉಗ್ರರನ್ನು ಬಗ್ಗು ಬಡಿಯುವ ಕಾರ್ಯದಲ್ಲಿ ನಿರತರಾಗಿದ್ದೇವೆ. ಆದರೆ ಪಾಕಿಸ್ತಾನ ಗಡಿಭಾಗದಲ್ಲಿ ಉಗ್ರರ ಹಾವಳಿ ತೀವ್ರವಾಗುತ್ತಿದೆ. ಆ ನಿಟ್ಟಿನಲ್ಲಿ ಉಗ್ರರನ್ನು ಮಟ್ಟಹಾಕಲು ಪಾಕಿಸ್ತಾನ ಪೂರ್ಣ ಪ್ರಮಾಣದಲ್ಲಿ ಸಹಕಾರ ನೀಡಬೇಕಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಇವನ್ನೂ ಓದಿ