ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಭಾರತ-ಪಾಕ್ ಯುದ್ಧ ಭೀತಿಯಿಂದ ಹೊರಬರಬೇಕು: ಗಿಲಾನಿ (Yousuf Raza Gilani | Pakistan | India | war phobia | Manmohan Singh)
ಪಾಕಿಸ್ತಾನ ಮತ್ತು ಭಾರತ ಯುದ್ಧ ಭೀತಿಯಿಂದ ಹೊರ ಬರಬೇಕಾಗಿದೆ ಎಂದು ಪಾಕ್ ಪ್ರಧಾನಿ ಯೂಸುಫ್ ರಾಜಾ ಗಿಲಾನಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಭಾರತದ ಪ್ರಧಾನಿ ಮನಮೋಹನ್ ಸಿಂಗ್ ಅವರ ಆಹ್ವಾನದಂತೆ ಮೊಹಾಲಿಯಲ್ಲಿ ನಡೆದ ವಿಶ್ವಕಪ್ ಸೆಮಿ ಫೈನಲ್ ವೀಕ್ಷಿಸಿದ ಬಳಿಕ ಸಂಸತ್ತಿನ ಮೇಲ್ಮನೆಯಲ್ಲಿ ನಡೆದ ಸಭೆಯಲ್ಲಿ ಗಿಲಾನಿ ಈ ಪ್ರತಿಕ್ರಿಯೆ ನೀಡಿದ್ದಾರೆ.

ಎರಡೂ ದೇಶಗಳಲ್ಲಿರುವ ಬಡತನವನ್ನು ಹೋಗಲಾಡಿಸುವ ಬಗ್ಗೆ ನಾವು ಕಾಳಜಿ ವಹಿಸಬೇಕಾಗಿದೆ. ಇದು ಸಾಧ್ಯವಾಗಬೇಕಾದರೆ ಎರಡೂ ರಾಷ್ಟ್ರಗಳು ಯುದ್ಧ ಭೀತಿಯಿಂದ ಹೊರಬರಬೇಕು ಎಂದು ಹೇಳಿದರು.

ಬಡತನ ಎರಡೂ ದೇಶಗಳು ಎದುರಿಸುತ್ತಿರುವ ಗಂಭೀರ ಸಮಸ್ಯೆ ಎಂಬುದನ್ನು ಉಭಯ ದೇಶಗಳು ಒಪ್ಪಿಕೊಂಡಿವೆ. ಬಡತನ, ಹಸಿವು, ಅನಾರೋಗ್ಯ, ಆಹಾರ ಭದ್ರತೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ನಾವು ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು ಎಂಬ ಅಭಿಪ್ರಾಯಕ್ಕೆ ಬರಲಾಯಿತು ಎಂದು ಗಿಲಾನಿ ತಿಳಿಸಿದರು.

ಕಾಶ್ಮೀರ ವಿಷಯಕ್ಕೆ ಸಂಬಂಧಿಸಿ ಮಾತುಕತೆ ನಡೆಸಿಲ್ಲ ಎಂಬ ಟೀಕೆಗೆ ಉತ್ತರಿಸಿದ ಅವರು, ಪ್ರಸಕ್ತ ಸಮಸ್ಯೆಯಾಗಿರುವಪ ಕಾಶ್ಮೀರದ ವಿಚಾರಕ್ಕೆ ಸಂಬಂಧಿಸಿ ಮಾತುಕತೆ ನಡೆಸಲಾಗಿದೆ. ಇದು ಉಭಯ ದೇಶಗಳ ಸಮಸ್ಯೆಯಾಗಿದ್ದು, ನಾವೇ ಪರಿಹಾರ ಕಂಡುಕೊಳ್ಳಬೇಕು. ಈ ವಿಚಾರದಲ್ಲಿ ತೃತೀಯಶಕ್ತಿ ಪ್ರವೇಶ ಅಗತ್ಯವಿಲ್ಲ ಮತ್ತು ಅದು ಸರಿಯಲ್ಲ ಎಂಬುದನ್ನು ಎರಡೂ ದೇಶಗಳು ಒಪ್ಪಿಕೊಂಡಿವೆ. ಭಾರತ ಎಲ್ಲ ವಿಚಾರಗಳಿಗೆ ಸಂಬಂಧಿಸಿದಂತೆ ಮಾತುಕತೆಗೆ ಸಿದ್ದ ಎಂದು ಸಿಂಗ್ ಹೇಳಿರುವುದಾಗಿ ಗಿಲಾನಿ ತಿಳಿಸಿದರು.
ಇವನ್ನೂ ಓದಿ