ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ತಾಲಿಬಾನ್ ಮಟ್ಟ ಹಾಕಲು ಪಾಕ್ ವಿಫಲವಾಗಿದೆ: ಅಮೆರಿಕ (Pakistan | Taliban militants | al-Qaida | US | Barack Obama)
ತಾಲಿಬಾನ್ ಉಗ್ರರನ್ನು ಸದೆಬಡಿಯುವಲ್ಲಿ ಪಾಕಿಸ್ತಾನ ಹಿನ್ನಡೆ ಅನುಭವಿಸಿರುವುದಾಗಿ ಆರೋಪಿಸಿರುವ ಅಮೆರಿಕ, ಅಲ್ ಖಾಯಿದಾ ಸಂಪರ್ಕ ಹೊಂದಿರುವ ತಾಲಿಬಾನ್ ಹಿಡಿತದಲ್ಲಿರುವ ಪ್ರದೇಶಗಳನ್ನು ವಶಪಡಿಸಿಕೊಳ್ಳಲು ಹೋರಾಡುತ್ತಿರುವ ಭದ್ರತಾ ಪಡೆಗಳು ಭಾರೀ ಪ್ರಮಾಣದ ಬೆಲೆ ತೆರುತ್ತಿರುವುದಾಗಿ ಅಮೆರಿಕ ಮಂಗಳವಾರ ಬಿಡುಗಡೆ ಮಾಡಿರುವ ವರದಿಯಲ್ಲಿ ಅಸಮಾಧಾನವ್ಯಕ್ತಪಡಿಸಿದೆ.

ಬುಡಕಟ್ಟು ಪ್ರದೇಶದಲ್ಲಿ ಸುರಕ್ಷಿತವಾಗಿರುವ ತಾಲಿಬಾನ್ ಉಗ್ರರನ್ನು ಮಟ್ಟಹಾಕಲು ಪಾಕಿಸ್ತಾನ ಹೆಚ್ಚಿನ ಶ್ರಮವಹಿಸಬೇಕು ಎಂದು ಹೇಳಿರುವ ಅಮೆರಿಕ ಅಫ್ಘಾನಿಸ್ತಾನದ ಗಡಿಪ್ರದೇಶದಲ್ಲಿ ಅಮೆರಿಕ ಪಡೆಗಳ ಮೇಲೆಯೇ ಉಗ್ರರು ದಾಳಿ ನಡೆಸುತ್ತಿದ್ದಾರೆ ಎಂದು ದೂರಿದೆ.

ಆ ನಿಟ್ಟಿನಲ್ಲಿ ಪಾಕಿಸ್ತಾನದಲ್ಲಿನ ಭಯೋತ್ಪಾದಕ ಕೃತ್ಯವನ್ನು ಮಟ್ಟಹಾಕುವಲ್ಲಿ ಅದು ವಿಫಲವಾಗಿದೆ. ಈಗಾಗಲೇ ಅಫ್ಘಾನ್ ಮತ್ತು ಪಾಕ್ ಗಡಿಯಲ್ಲಿ ಸುಮಾರು 147,000 ಅಮೆರಿಕ ಸೈನಿಕ ಪಡೆ ಕಾರ್ಯಾಚರಿಸುತ್ತಿದೆ ಎಂದು ವರದಿ ವಿವರಿಸಿದೆ.

ತಾಲಿಬಾನ್ ಉಗ್ರರನ್ನು ಸದೆಬಡಿಯುವಲ್ಲಿ ಪಾಕಿಸ್ತಾನ ಮಿಲಿಟರಿ ಪಡೆ ವಿಫಲವಾಗಿರುವುದು ಸ್ಪಷ್ಟವಾಗಿದೆ. ಅಷ್ಟೇ ಅಲ್ಲ ಪೂರ್ವ ಪಾಕಿಸ್ತಾನದಲ್ಲಿನ ಸೂಫಿ ದರ್ಗಾದ ಮೇಲೆ ಆತ್ಮಹತ್ಯಾ ಬಾಂಬರ್ ನಡೆಸಿದ ಪರಿಣಾಮ 41 ಮಂದಿ ಸಾವನ್ನಪ್ಪಿದ್ದಾರೆ.
ಇವನ್ನೂ ಓದಿ