ಅಮೆರಿಕದ ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿ (ಸಿಐಎ) ಪಾಕಿಸ್ತಾನದ ನೆಲದಲ್ಲಿ ಕಾರ್ಯಾಚರಿಸುತ್ತಿಲ್ಲ ಎಂದು ಪಾಕ್ ಆಂತರಿಕ ಸಚಿವ ರೆಹಮಾನ್ ಮಲಿಕ್ ಸ್ಪಷ್ಟಪಡಿಸಿದ್ದಾರೆ.
ಇಸ್ಲಾಮಾಬಾದ್‌ನಲ್ಲಿ ಸಂಸತ್ ಹೊರಭಾಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಾಕಿಸ್ತಾನದಲ್ಲಿ ಕಾನೂನುಬಾಹಿರವಾಗಿ ನೆಲೆಸಿರುವ ವಿದೇಶಿಯರನ್ನು ಗಡಿಪಾರು ಮಾಡಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದರು.
ಅಲ್ಲದೇ ವಿಸಿಟಿಂಗ್ ವೀಸಾದಲ್ಲಿ ಪಾಕಿಸ್ತಾನಕ್ಕೆ ಆಗಮಿಸಿ ಇಲ್ಲಿಯೇ ಕಾರ್ಯನಿರ್ವಹಿಸುವುದಕ್ಕೆ ಸರಕಾರ ಯಾವುದೇ ರೀತಿಯಲ್ಲೂ ಅನುಮತಿ ನೀಡುವುದಿಲ್ಲ ಎಂದು ತಿಳಿಸಿರುವುದಾಗಿ ವರದಿ ವಿವರಿಸಿದೆ.
ಪಾಕಿಸ್ತಾನದ ಇಂಟೆಲಿಜೆನ್ಸ್ ಏಜೆನ್ಸಿ (ಐಎಸ್ಐ) ದೇಶದ ಸೇವೆಯನ್ನು ಮಾಡುತ್ತಿದೆ. ಹಾಗಾಗಿ ಐಎಸ್ಐಗೆ ಸಂಬಂಧಿಸಿದಂತೆ ಯಾವುದೇ ಟೀಕೆ ಮಾಡುವುದಿಲ್ಲ ಎಂದು ಈ ಸಂದರ್ಭದಲ್ಲಿ ತಿಳಿಸಿದರು.