ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ದುಬೈ:ಅಣ್ಣಾ ಹಜಾರೆಗೆ ಬೆಂಬಲ ನೀಡಿದ ಭಾರತೀಯರಿಗೆ ಜೈಲು (Anna Hazare,| Indian Consulate | Dubai | Al Mumzar Park | International News in Kannada)
ಭ್ರಷ್ಟಾಚಾರದ ವಿರುದ್ಧ ಅಣ್ಣಾ ಹಜಾರೆ ಅವರು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಬೆಂಬಲಿಸಿ ದುಬೈನಲ್ಲಿ ಪ್ರತಿಭಟನಾ ರ‌್ಯಾಲಿ ಆಯೋಜಿಸಿದ್ದಕ್ಕಾಗಿ ಐವರು ಭಾರತೀಯರನ್ನು ಪೊಲೀಸರು ಬಂಧಿಸಿದ್ದಾರೆ. 12 ದಿನಗಳಿಂದ ಜೈಲಿನಲ್ಲಿರುವವರ ಬಿಡುಗಡೆಗೆ ಭಾರತೀಯ ರಾಯಭಾರ ಕಚೇರಿ ಕ್ರಮ ಕೈಗೊಳ್ಳಲಿದೆ ಎಂದು ವರದಿಯೊಂದು ತಿಳಿಸಿದೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಬಂಧಿತರೆಲ್ಲರೂ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, 20ರಿಂದ 30ವರ್ಷದೊಳಗಿನವರಾಗಿದ್ದು, ಕೇರಳ, ಮಹಾರಾಷ್ಟ್ರ ಮತ್ತು ಗುಜರಾತ್‌ ನವರಾಗಿದ್ದಾರೆ. ಕಳೆದ ಆಗಸ್ಟ್‌ 20 ರಂದು ದುಬೈನ ಅಲ್‌ ಮುಜುಂದಾರ್‌ ಪಾರ್ಕ್‌‌ನಿಂದ ಪ್ರತಿಭಟನಾ ರ‌್ಯಾಲಿಯನ್ನು ಆಯೋಜಿಸಲಾಗಿತ್ತು. ಇದಕ್ಕಾಗಿ ಸೋಷಿಯಲ್‌ ನೆಟ್‌ವರ್ಕಿಂಗ್‌ ಸೈಟ್‌ಗಳನ್ನು ಬಳಸಿಕೊಳ್ಳಲಾಗಿತ್ತು.

ಭ್ರಷ್ಟಾಚಾರದ ವಿರುದ್ಧ ಸಮರ ಸಾರುವ ಮೂಲಕ ದೇಶದ ಒಳಿತಿಗಾಗಿ ಹೋರಾಡುತ್ತಿರುವ ಅಣ್ಣಾ ಹಜಾರೆ ಅವರನ್ನು ಬೆಂಬಲಿಸಲು ರಾತ್ರಿ 8.30ಕ್ಕೆ ಆರಂಭವಾಗುವ ಪ್ರತಿಭಟನಾ ರ‌್ಯಾಲಿಯು ದಕ್ಷಿಣದ ಬೀಚ್‌ ಮಾರ್ಗವಾಗಿ 1.5 ಕಿಲೋ ಮೀಟರ್‌ ಸಾಗಲಿದೆ. ಈ ಸಂದರ್ಭದಲ್ಲಿ ಶಾಂತಿ ಕಾಪಾಡಿ ಎಂದು ಸೋಷಿಯಲ್‌ ನೆಟ್‌ವರ್ಕಿಂಗ್‌ ಮೂಲಕ ಸಂದೇಶ ಕಳುಹಿಸಲಾಗಿತ್ತು.

ರ‌್ಯಾಲಿಯನ್ನು ಆಯೋಜಿಸಲು ಪೂರ್ವಾನುಮತಿ ಪಡೆಯದೇ ಇದ್ದುದರಿಂದ ಆಯೋಜಕರನ್ನು ಬಂಧಿಸಲಾಗಿದೆ ಎಂದು ದುಬೈನಲ್ಲಿರುವ ಭಾರತೀಯ ಪ್ರಧಾನ ರಾಯಭಾರಿ ಸಂಜಯ್‌ ವರ್ಮಾ ತಿಳಿಸಿದ್ದಾರೆ. 'ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ದುಬೈ ಪೊಲೀಸರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ದುಬೈನಲ್ಲಿ ರಂಜಾನ್‌ ರಜಾದಿನವೇ ಕಾರಣ, ಭಾನುವಾರ ಬಂಧಿತರೆಲ್ಲರಿಗೂ ಜಾಮೀನಿನ ಮೇಲೆ ಬಿಡುಗಡೆ ಮಾಡುವ ಸಾಧ್ಯತೆಯಿದೆ' ಎಂದು ತಿಳಿಸಿದ್ದಾರೆ.

ಈ ಕುರಿತು ಸ್ಥಳೀಯ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಜಯ್‌ ವರ್ಮಾ,'ಭಾರತದಲ್ಲಿ ಭ್ರಷ್ಟಾಚಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಕುರಿತು ತಮ್ಮ ಭಾವನೆಯನ್ನು ಹೊರ ಹಾಕಿದ್ದಾರೆ. ಈ ಕುರಿತು ಸಲ್ಲಿಸಿರುವ ಜಂಟಿ ಅರ್ಜಿಯಲ್ಲಿ ಈ ಕುರಿತ ಕಳವಳದ ಬಗ್ಗೆ ವಿವರಿಸಲಾಗಿದೆ. ಭಾರತದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೇ ಇರುವುದೇ ಒಳಿತು. ಸ್ಥಳೀಯ ಕಾನೂನನ್ನು ಗೌರವಿಸುವುದು ಎಲ್ಲರ ಕರ್ತವ್ಯ ಎಂದು ತಿಳಿಸಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಅಣ್ಣಾ ಹಜಾರೆ, ಭ್ರಷ್ಟಾಚಾರದ ವಿರುದ್ಧ ಹೋರಾಟ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಫಾರಿನ್ ಸುದ್ದಿ, ಅಂತಾರಾಷ್ಟ್ರೀಯ, ಅಂತರರಾಷ್ಟ್ರೀಯ, ಅಂತರ್ರಾಷ್ಟ್ರೀಯ ಸುದ್ದಿ