ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ವಿಶ್ವಸಂಸ್ಥೆ-ಭಾರತಕ್ಕೆ ಸ್ಥಾನ ಕೊಡಲು ಅಭ್ಯಂತರವಿಲ್ಲ: ಚೀನಾ (United Nations Security Council | China | G-4 countries | India | Latest International News in Kannada)
ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಜಿ4 ರಾಷ್ಟ್ರಗಳಿಗೆ ಕಾಯಂ ಸ್ಥಾನ ನೀಡುವ ಕುರಿತು ಭಾರತ, ಜಪಾನ್‌, ಚೀನಾಮ ಬ್ರೆಜಿಲ್‌ ಮತ್ತು ಜರ್ಮನಿಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುವುದಾಗಿ ಚೀನಾ ಹೇಳಿದೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಅಭಿವೃದ್ಧಿ ಶೀಲ ರಾಷ್ಟ್ರಗಳು ಅದರಲ್ಲೂ ಮುಖ್ಯವಾಗಿ ಆಫ್ರಿಕಾ ಖಂಡದ ರಾಷ್ಟ್ರಗಳು ಇರಬೇಕು ಎಂಬುದು ನಮ್ಮ ಬಯಕೆಯಾಗಿದೆ ಎಂದು ಚೀನಾದ ವಿದೇಶಾಂಗ ಖಾತೆ ಸಹಾಯಕ ಸಚಿವ ವ್ಯೂಹೈಲಾಂಗ್‌ ತಿಳಿಸಿದ್ದಾರೆ.

ಪ್ರಸ್ತುತ ಅಂತಾರಾಷ್ಟ್ರೀಯ ವಿದ್ಯಮಾನಗಳಿಗೆ ಅನುಗುಣವಾಗಿ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಅಗತ್ಯವಿರುವ ಬದಲಾವಣೆಗಳನ್ನು ಮಾಡುವುದನ್ನು ಚೀನಾ ಬೆಂಬಲಿಸುತ್ತದೆ ಎಂದು ವ್ಯೂ ತಿಳಿಸಿದ್ದಾರೆ. ವಿದೇಶಾಂಗ ಸಚಿವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವ್ಯೂ ಈ ವಿಷಯ ತಿಳಿಸಿದ್ದಾರೆ.

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿ ಸುಧಾರಣೆಗೆ ಸಂಬಂಧಿಸಿದಂತೆ ಜಪಾನ್‌, ಭಾರತ, ಬ್ರೆಜಿಲ್‌ ಮತ್ತು ಜರ್ಮನಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ವ್ಯೂ ಹೇಳಿದರು.

ಜಪಾನ್‌, ಭಾರತ, ಬ್ರೆಜಿಲ್‌ ಮತ್ತು ಜರ್ಮನಿ ಜಿ 4 ಒಕ್ಕೂಟವನ್ನು ರಚಿಸಿಕೊಂಡಿದ್ದು, ವಿಶ್ವ ಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯತ್ವಕ್ಕಾಗಿ ಒತ್ತಾಯಿಸುತ್ತಿವೆ.

ಪ್ರಸ್ತುತ ಈ ರಾಷ್ಟ್ರಗಳು ಮಂಡಳಿಯಲ್ಲಿ ಕಾಯಂ ಸದಸ್ಯತ್ವ ಹೊಂದಿಲ್ಲದಿದ್ದರೂ ಈ ಎಲ್ಲ ರಾಷ್ಟ್ರಗಳು ಪ್ರಮುಖ ಪಾತ್ರ ವಹಿಸುತ್ತಿರುವುದನ್ನು ನಾವು ಗೌರವಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸುಧಾರಣೆ ಮಾಡಬೇಕು ಎಂಬುದಕ್ಕೆ ಬಹುತೇಕ ರಾಷ್ಟ್ರಗಳ ಬೆಂಬಲವಿದೆ ಎಂದು ವ್ಯೂ ಅವರ ಹೇಳಿಕೆಯನ್ನು ಉಲ್ಲೇಖಿಸಿ ಸರಕಾರಿ ಪತ್ರಿಕೆ ಕ್ಸಿನ್‌ ಹುವಾ ತಿಳಿಸಿದೆ.

ವಿಶ್ವ ಸಂಸ್ಥೆ ಭದ್ರಯಾ ಮಂಡಳಿಯಲ್ಲಿ ಕಾಯಂ ಸದಸ್ಯತ್ವದೊಂದಿಗೆ ವಿಟೋ ಅಧಿಕಾರ ಹೊಂದಿರುವ ಚೀನಾದೊಂದಿಗೆ ಇತರೆ ಕಾಯಂ ಸದಸ್ಯತ್ವ ಹೊಂದಿರುವ ರಾಷ್ಟ್ರಗಳಾದ ಅಮೆರಿಕ, ಇಂಗ್ಲೆಂಡ್‌, ಫ್ರಾನ್ಸ್‌ ಮತ್ತು ರಷ್ಯಾ ಸಹಾ ಭಾರತಕ್ಕೆ ಕಾಯಂ ಸದಸ್ಯತ್ವ ನೀಡುವುದಕ್ಕೆ ಬಹಿರಂಗವಾಗಿಯೇ ಬೆಂಬಲಿಸಿದ್ದವು. ಜುಲೈಮಲ್ಲಿ ಚೀನಾಕ್ಕೆ ಭೇಟಿ ನೀಡಿದ್ದ ಸಿಪಿಐಎಂ ಮುಖಂಡ ಸೀತಾರಾಂ ಯೆಚೂರಿ ಅವರೊಂದಿಗೆ ಮಾತುಕತೆ ನಡೆಸಿದ್ದ ಚೀನಾದ ಹಿರಿಯ ರಾಜತಾಂತ್ರಿಕರೊಬ್ಬರು ಭಾರತ ಕಾಯಂ ಸದಸ್ಯತ್ವ ಪಡೆಯಲು ನಮ್ಮದೇನೂ ಆಕ್ಷೇಪಣೆಯಿಲ್ಲ ಎಂದು ಹೇಳಿದ್ದರಲ್ಲದೇ ಐತಿಹಾಸಿಕ ವೈರತ್ವದಿಂದಾಗಿ ಜಪಾನ್‌ಗೆ ಸದಸ್ಯತ್ವ ನೀಡುವುದಕ್ಕೆ ತಮ್ಮ ವಿರೋಧವಿದೆ ಎಂದೂ ಸ್ಪಷ್ಟಪಡಿಸಿದ್ದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ವಿಶ್ವ ಸಂಸ್ಥೆ ಭದ್ರತಾ ಮಂಡಳಿ ಕಾಯಂ ಸ್ಥಾನ, ಚೀನಾ, ಜಿ4 ರಾಷ್ಟ್ರಗಳು, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಫಾರಿನ್ ಸುದ್ದಿ, ಅಂತಾರಾಷ್ಟ್ರೀಯ, ಅಂತರರಾಷ್ಟ್ರೀಯ, ಅಂತರ್ರಾಷ್ಟ್ರೀಯ ಸುದ್ದಿ