ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕಿಸ್ತಾನ:ಅವಳಿ ಆತ್ಮಹತ್ಯಾ ಬಾಂಬ್ ಸ್ಫೋಟಕ್ಕೆ 16 ಬಲಿ (Pakistan | suicide blasts | Latest International News in Kannada)
ಭದ್ರತಾ ಪಡೆಗಳನ್ನೇ ಗುರಿಯಾಗಿರಿಸಿಕೊಂಡು ಪಾಕಿಸ್ತಾನದಲ್ಲಿ ಬುಧವಾರ ನಡೆದ ಅವಳಿ ಆತ್ಮಹತ್ಯಾ ಬಾಂಬ್‌ ಸ್ಫೋಟದಲ್ಲಿ 16 ಮಂದಿ ಮೃತಪಟ್ಟಿದ್ದು, 32ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್‌ ಖೈದಾ ಉಗ್ರಗಾಮಿ ಸಂಘಟನೆಯ ಹಿರಿಯ ಮುಖಂಡನನ್ನು ಬಂಧಿಸಿದ್ದಕ್ಕಾಗಿ ಪ್ರತೀಕಾರ ತೆಗೆದುಕೊಳ್ಳಲು ಉಗ್ರಗಾಮಿ ಸಂಘಟನೆ ಈ ದಾಳಿ ನಡೆಸಿದೆ ಎನ್ನಲಾಗಿದೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಕ್ವೆಟ್ಟಾದ ಹಿರಿಯ ಸೇನಾಧಿಕಾರಿಗಳ ನಿವಾಸದ ಹೊರಗೆ ಸ್ಫೋಟಕಗಳನ್ನು ತುಂಬಿದ್ದ ಕಾರನ್ನು ಆತ್ಮಹತ್ಯಾ ದಾಳಿಕೋರನೊಬ್ಬ ಸ್ಫೋಟಿಸಿದ, ಇದಕ್ಕೂ ಮುನ್ನ ಇನ್ನೊಬ್ಬ ಆತ್ಮಹತ್ಯಾ ದಾಳಿಕೋರನು ಸೇನಾಧಿಕಾರಿಯ ನಿವಾಸದ ಒಳಗೆ ಬಾಂಬ್‌ ಸ್ಫೋಟಿಸಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಹಮೀದ್‌ ಶಕೀಲ್‌ ತಿಳಿಸಿದ್ದಾರೆ. ಸ್ಫೋಟದಿಂದಾಗಿ 16 ಮಂದಿ ಮೃತಪಟ್ಟಿದ್ದು, 32ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಅವಳಿ ಬಾಂಬ್‌ ಸ್ಫೋಟದಲ್ಲಿ ಹಿರಿಯ ಸೇನಾಧಿಕಾರಿ ಹಾಗೂ ಅವರ ಕುಟುಂಬದ ಸದಸ್ಯರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸ್ಫೋಟದಲ್ಲಿ ಸೇನಾಪಡೆಯ ಹಿರಿಯ ಅಧಿಕಾರಿ ಸೇರಿದಂತೆ ನಾಲ್ಕು ಯೋಧರು ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಸೇನಾಧಿಕಾರಿಯ ಹೆಂಡತಿ ಹಾಗೂ ಇಬ್ಬರು ಮಕ್ಕಳೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಲೂಚಿಸ್ತಾನ ಪ್ರಾಂತ್ಯದ ಕ್ವೆಟ್ಟಾ ನಗರದಲ್ಲಿರುವ ಹಿರಿಯ ಸೇನಾಧಿಕಾರಿಯ ನಿವಾಸವು ಅಫ್ಘಾನಿಸ್ತಾನ ಮತ್ತು ಇರಾನ್‌ ಗಡಿ ಭಾಗದಲ್ಲಿದೆ.

ಅಮೆರಿಕ, ಯೂರೋಪ್‌ ಮತ್ತು ಆಸ್ಟ್ರೇಲಿಯಾದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಅಲ್‌ ಖೈದಾ ಮುಖಂಡನೊಬ್ಬನ್ನು ಅರೆ ಸೇನಾ ಪಡೆ ಬಂಧಿಸಿರುವುದಾಗಿ ಪಾಕ್‌ ಸೇನೆ ತಿಳಿಸಿತ್ತು.

ಅಲ್‌ ಖೈದಾ ಉಗ್ರ ಯೂನುಸ್‌ ಅಲ್‌ ಮುಲ್ತಾನಿ ಹಾಗೂ ಆತ ಇಬ್ಬರು ಸಹಚರರಾದ ಅಬ್ದುಲ್‌ ಗಫಾರ್‌ ಅಲ್‌ ಶಮಿ ಹಾಗೂ ಮೆಸ್ಸಾರಾ ಅಲ್‌ ಸಮಿ ಅವರನ್ನು ಬಂಧಿಸಿರುವುದಾಗಿ ಪಾಕಿಸ್ತಾನ ಸೇನೆ ತಿಳಿಸಿತ್ತು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಪಾಕಿಸ್ತಾನ, ಆತ್ಮಹತ್ಯಾ ಬಾಂಬ್ ದಾಳಿ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಫಾರಿನ್ ಸುದ್ದಿ, ಅಂತಾರಾಷ್ಟ್ರೀಯ, ಅಂತರರಾಷ್ಟ್ರೀಯ, ಅಂತರ್ರಾಷ್ಟ್ರೀಯ ಸುದ್ದಿ