ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಚೀನಾ ವಿದ್ಯಾರ್ಥಿಗಳಿಗೆ ಸೆಕ್ಸ್- ಲವ್ ಕೋರ್ಸ್ ಕಡ್ಡಾಯ (Sex Education | China | Latest, News in Kannada | International News in Kannada)
ಹದಿಹರೆಯದ ವಿದ್ಯಾರ್ಥಿಗಳು ಓದುವ ಸಂದರ್ಭದಲ್ಲಿ ಪ್ರೇಮದ ಸುಳಿಯಲ್ಲಿ ಬೀಳುವುದು ಸಹಜ. ಈ ಪ್ರೇಮವು ಕಾಮಕ್ಕೆ ತಿರುಗಿ ಏನೆಲ್ಲಾ ಅಧ್ವಾನಗಳಾಗುವುದು ಎಲ್ಲರಿಗೂ ತಿಳಿದೇ ಇದೆ. ವಿದ್ಯಾರ್ಥಿಗಳ ಮನಸ್ಥಿತಿಯನ್ನು ಚೆನ್ನಾಗಿ ಅರ್ಥಮಾಡಿಕೊಂಡಿರುವ ಚೀನಾ ಸರಕಾರ ಉನ್ನತ ಶಿಕ್ಷಣದಲ್ಲಿ ಪ್ರೀತಿ ಮತ್ತು ಲೈಂಗಿಕತೆಯನ್ನೂ ಈ ವರ್ಷದಿಂದಲೇ ಪಠ್ಯದಲ್ಲಿ ಕಡ್ಡಾಯಗೊಳಿಸಿ ಆದೇಶ ನೀಡಿದೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಲೈಂಗಿಕ ಶಿಕ್ಷಣ ಹಾಗೂ ಪ್ರೇಮ ಪಾಠವನ್ನೊಳಗೊಂಡ ಮನಃಶಾಸ್ತ್ರ ಅಧ್ಯಯನವನ್ನೂ ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವ ಚೀನಾ ಶಿಕ್ಷಣ ಸಚಿವಾಲಯ, ರಾಷ್ಟ್ರಾದ್ಯಂತ ಇರುವ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ವಿಷಯವನ್ನು ಕಡ್ಡಾಯಗೊಳಿಸುವಂತೆ ಸೂಚನೆ ನೀಡಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ತೀವ್ರವಾಗಿ ಮಾನಸಿಕ ಒತ್ತಡಕ್ಕೆ ಒಳಗಾಗುವ ಹಿನ್ನೆಲೆಯಲ್ಲಿ ಮಾನಸಿಕ ಆರೋಗ್ಯ ವಿಷಯವನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕಡ್ಡಾಯಗೊಳಿಸಲಾಗಿರುವ ಮಾನಸಿಕ ಆರೋಗ್ಯ ಕೋರ್ಸ್‌ನಲ್ಲಿ ಏಳು ವಿಭಾಗಗಳಿದ್ದು, ಇದರೊಂದಿಗೆ ಪ್ರೀತಿ ಮತ್ತು ಲೈಂಗಿಕತೆ ಕುರಿತ ಪಾಠಗಳೂ ಇರುತ್ತವೆ ಎಂದು ಹೇಳಿರುವ ಅಧಿಕಾರಿ, ಈ ಕೋರ್ಸ್‌ ಮಾನಸಿಕ ಒತ್ತಡವನ್ನು ಹೇಗೆ ಎದುರಿಸಬೇಕು ‌ಎಂಬ ವಿಷಯವನ್ನೂ ಒಳಗೊಂಡಿರುತ್ತದೆ ಎಂದು ಅವರು ಹೇಳಿದ್ದಾರೆ.

ಸರಕಾರದ ಈ ನಿರ್ಧಾರದ ಕುರಿತು ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಪೀಕಿಂಗ್‌ ವಿಶ್ವ ವಿದ್ಯಾಲಯದಲ್ಲಿ ವೈದ್ಯಕೀಯ ವಿಜ್ಞಾನ ವಿಷಯ ಅಧ್ಯಯನ ಮಾಡುತ್ತಿರುವ ಗ್ಯೋ ಚಾಂಗ್‌, ಈ ರೀತಿಯ ವಿಷಯಗಳು ಹೊಸ ವಿದ್ಯಾರ್ಥಿಗಳಿಗೆ ಸರ್ವೇ ಸಾಮಾನ್ಯವಾಗಿರುತ್ತವೆ ಎಂದು ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಇಂಟರ್‌ನ್ಯಾಷನಲ್‌ ಬ್ಯುಸಿನೆಸ್‌ ಅಂಡ್‌ ಎಕನಾಮಿಕ್ಸ್‌ ಯೂನಿವರ್ಸಿಟಿಯ ವಿದ್ಯಾರ್ಥಿ ಕ್ವಿಂಗ್‌ ಯುನ್‌ ಇಂತಹ ವಿಷಯಗಳ ಅಧ್ಯಯನ ಕಡ್ಡಾಯಗೊಳಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಚೀನಾ, ಸೆಕ್ಸ್ ಲವ್ ಕೋರ್ಸ್ ಕಡ್ಡಾಯ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಫಾರಿನ್ ಸುದ್ದಿ, ಅಂತಾರಾಷ್ಟ್ರೀಯ, ಅಂತರರಾಷ್ಟ್ರೀಯ, ಅಂತರ್ರಾಷ್ಟ್ರೀಯ ಸುದ್ದಿ